ಬೆಂಗಳೂರು:ಕೇಂದ್ರ ಸಚಿವ ಸುರೇಶ್​ ಅಂಗಡಿಯವರು ದೆಹಲಿಯ ಏಮ್ಸ್​ನಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಸುರೇಶ್​ ಅಂಗಡಿಯವರಿಗೆ 65 ವರ್ಷ ವಯಸ್ಸಾಗಿತ್ತು. 1955 ಜೂನ್ 1ರಂದು ಜನಿಸಿದ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿ ಸಂಸದರಾಗಿದ್ದರು. ಪ್ರಸ್ತುತ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವರಾಗಿದ್ದರು.
ಅಂಗಡಿಯವರಿಗೆ ಸೆಪ್ಟೆಂಬರ್​ 11ರಂದು ಕರೊನಾ ದೃಢಪಟ್ಟಿತ್ತು. ಯಾವುದೇ ರೋಗ ಲಕ್ಷಣಗಳಿಲ್ಲದೇ ಕರೊನಾ ಪಾಸಿಟಿವ್​ ವರದಿಯಾಗಿತ್ತು. ಈ ಕುರಿತು ಸ್ವತಃ ಅವರೇ ಟ್ವೀಟ್​ ಮಾಡಿದ್ದರು. ಅಂದಿನಿಂದ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ನಾನು#Covid19ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ.
ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ.@PMOIndia
— Mangal Suresh Angadi (@MangalSAngadi)September 11, 2020

ಅಂಗಡಿಯವರು ಬೆಳಗಾವಿ ಜಿಲ್ಲೆ ಮತ್ತು ತಾಲೂಕಿನ ಕೆ.ಕೆ. ಕೊಪ್ಪ ಮೂಲದವರು. ಚೆನ್ನಬಸಪ್ಪ ಮತ್ತು ಸೋಮವ್ವ ದಂಪತಿಯ ಮಗನಾಗಿ ಹುಟ್ಟಿದ ಅಂಗಡಿಯವರ ಪೂರ್ಣ ಹೆಸರು ಸುರೇಶ್​ ಚನ್ನಬಸಪ್ಪ ಅಂಗಡಿ. ಇವರು ಇಬ್ಬರು ಪುತ್ರಿ ಮತ್ತು ಪತ್ನಿಯನ್ನು ಅಗಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
