ನವದೆಹಲಿ:ಎಲ್ಲ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್​ಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ಸೋಮವಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಈ ಸಂಬಂಧ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುರ್ಖಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಗುಜರಾತ್​ ಮತ್ತು ರಾಜಸ್ಥಾನದಲ್ಲಿ ಆಸ್ಪತ್ರೆಗಳಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 14 ಜನ ಪ್ರಾಣ ಕಳೆದುಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ. ಭಲ್ಲಾ ಅವರು ಪತ್ರದಲ್ಲಿ ಇದನ್ನೂ ಉಲ್ಲೇಖಿಸಿದ್ದು, ಇಡೀ ಜಗತ್ತು ಕೋವಿಡ್​ ರೋಗದ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಈ ರೀತಿಯಾಗಿ ಜನರ ಪ್ರಾಣಹಾನಿ ಆಗಬಾರದು. ಸಾಕಷ್ಟು ಮುನ್ನೆಚ್ಚರಿಕೆಯನ್ನು ಎಲ್ಲ ಆಸ್ಪತ್ರೆಗಳು, ನರ್ಸಿಂಗ್ ಹೋಮ್​​ಗಳು ತೆಗೆದುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ಕರೊನಾ ನಂತರ ಮೊದಲನೇ ಬಾರಿ ವಾರಣಾಸಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ; ಆರು ಲೇನ್​ ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ
ಎಲ್ಲ ಆಸ್ಪತ್ರೆ, ನರ್ಸಿಂಗ್ ಹೋಮ್​​ಗಳಲ್ಲಿ ತೆಗೆದುಕೊಂಡಿರುವ ಅಗ್ನಿಸುರಕ್ಷಾ ಕ್ರಮಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಆ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂಬುದನ್ನು ಖಾತರಿಗೊಳಿಸಬೇಕು. ಅಲ್ಲದೆ ತೆಗೆದುಕೊಂಡ ಕ್ರಮಗಳ ವಿವರವನ್ನು ಸಚಿವಾಲಯಕ್ಕೆ ಕಳುಹಿಸಬೇಕು ಎಂದು ಭಲ್ಲಾ ಸೂಚಿಸಿದ್ದಾರೆ. (ಏಜೆನ್ಸೀಸ್)
ಲೋಕಸಭೆಯ ಸೆಕ್ರೆಟರಿ ಜನರಲ್​ ಆಗಿ ಉತ್ಪಲ್ ಕುಮಾರ್ ಸಿಂಗ್ ನೇಮಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
