ನವದೆಹಲಿ:ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸುವುದಾಗಿ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಸೋಮವಾರ(ಆಗಸ್ಟ್​​​26) ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ನಿರ್ಧಾರಕ್ಕೆ ಕಾರಣವಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು MHA ನಿರ್ಧರಿಸಿದೆ ಎಂದು ಅವರು ತಿಳಿಸಿದರು.
ಇದನ್ನು ಓದಿ:ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲಾಗದ ಅಪರಾಧ; ತಪ್ಪಿತಸ್ಥರನ್ನು ಉಳಿಸಬಾರದೆಂದು ‘ನಮೋ’ ಸೂಚನೆ
ಹೊಸ ಜಿಲ್ಲೆಗಳ ರಚನೆಯು ಪ್ರತಿಯೊಂದು ಮೂಲೆ ಮೂಲೆಯಲ್ಲೂ ಆಡಳಿತವನ್ನು ಬಲಪಡಿಸುವ ಮೂಲಕ ಜನರಿಗೆ ಸಿಗುವ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ. ಲಡಾಖ್‌ನ ಜನರಿಗೆ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಸೃಷ್ಟಿಸಲು ಮೋದಿ ಸರ್ಕಾರ ಬದ್ಧವಾಗಿದೆ ಎಂದು ಅಮಿತ್​ ಷಾ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಮಾಡಿರುವ ಪೋಸ್ಟ್​​ನಲ್ಲಿ ತಿಳಿಸಿದ್ದಾರೆ.
ಲಡಾಖ್ ಪ್ರಸ್ತುತ ಲೇಹ್​ ಮತ್ತು ಕಾರ್ಗಿಲ್​ ಎಂಬ ಎರಡು ಜಿಲ್ಲಗಳನ್ನು ಹೊಂದಿದೆ. ಎರಡೂ ಜಿಲ್ಲೆಗಳು ತಮ್ಮ ಸ್ವಾಯತ್ತ ಜಿಲ್ಲಾ ಕೌನ್ಸಿಲ್‌ಗಳನ್ನು ಹೊಂದಿದ್ದು ಅವುಗಳ ಮೂಲಕ ಆಡಳಿತ ನಡೆಸುತ್ತವೆ. ಝನ್ಸ್ಕಾರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಎಂಬ ಹೊಸ ಜಿಲ್ಲೆಗಳ ರಚನೆಯ ನಂತರ ಲಡಾಖ್ ಒಟ್ಟು ಏಳು ಜಿಲ್ಲೆಗಳನ್ನು ಹೊಂದಿರುತ್ತದೆ.

ಲಡಾಖ್​ ಹಿಂದಿನ ಜಮ್ಮು ಮತ್ತು ಕಾಶ್ಮೀರದ ಒಂದು ಭಾಗವಾಗಿತ್ತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದಗೊಳಿಸಿದ ಬಳಿಕ ಸರ್ಕಾರವು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದೆ. ಇತ್ತೀಚೆಗೆ ಲಡಾಖ್​ನ ಪೂರ್ವ ಭಾಗದಲ್ಲಿ ಚೀನಾದ ಆಕ್ರಮಣದ ನಂತರ ಲಡಾಖ್​ ಕಾರ್ಯತಂತ್ರವಾಗಿ ಬಹಳ ಮುಖ್ಯವಾಗಿದೆ. ಲಡಾಖ್​ ವಿಶ್ವದ ಅತ್ಯಂತ ಪ್ರಸಿದ್ಧ ಭಾರತೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ.(ಏಜೆನ್ಸೀಸ್​​)
ಮಿಸ್​ ಇಂಡಿಯಾದಲ್ಲಿ ಮೀಸಲಾತಿ ವಿಚಾರ; ರಾಹುಲ್​ಗಾಂಧಿ ಹೇಳಿಕೆ ಬಾಲಿಶ ಎಂದು ಕೇಂದ್ರ ಸಚಿವ ವ್ಯಂಗ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + fourteen =
Remember me
