ನವದೆಹಲಿ:ಕೇಂದ್ರ ಸರ್ಕಾರವು ಮಾಜಿ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ಅವರನ್ನು ಭಾರತೀಯ ಆಡಳಿತ ಸೇವೆಯಿಂದ (IAS) ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದೆ. ಐಎಎಸ್ (ಪ್ರೊಬೇಷನ್) ನಿಯಮಗಳು 1954ರ ನಿಯಮ 12ರ ಅಡಿಯಲ್ಲಿ ಸರ್ಕಾರವು ಈ ಕ್ರಮವನ್ನು ಕೈಗೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ (ಸೆಪ್ಟೆಂಬರ್​​ 7) ತಿಳಿಸಿವೆ.
ಇದನ್ನು ಓದಿ:ಕಾರ್ಗಿಲ್ ಯುದ್ಧದಲ್ಲಿನ ತನ್ನ ಪಾತ್ರವನ್ನು ಮೊದಲ ಬಾರಿಗೆ ಒಪ್ಪಿದ ಪಾಕ್​​​; ಸೇನಾ ಮುಖ್ಯಸ್ಥ ಹೇಳಿದಿಷ್ಟು..
ಈ ಹಿಂದೆ ಯುಪಿಎಸ್‌ಸಿ ಕೂಡ ಐಎಎಸ್ ಅಭ್ಯರ್ಥಿತ್ವವನ್ನು ರದ್ದುಗೊಳಿಸುವಾಗ ವಂಚನೆ ಪ್ರಕರಣವನ್ನು ದಾಖಲಿಸಿತ್ತು. ಯುಪಿಎಸ್​ಸಿ ಪರೀಕ್ಷೆ 2022ರ ಮೀಸಲಾತಿ ಪ್ರಯೋಜನಗಳನ್ನು ಪಡೆಯಲು ಪೂಜಾ ಖೇಡ್ಕರ್​​​ ಸುಳ್ಳು ಮಾಹಿತಿ ಒದಗಿಸಿದ್ದಾರೆ ಎಂದು ಆರೋಪಿಸಿ ಜುಲೈ 31 ರಂದು ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿತು. ಜತಗೆ ಭವಿಷ್ಯದಲ್ಲಿ ಯಾವುದೇ ಪರೀಕ್ಷೆಗಳಿಗೆ ಹಾಜರಾಗದಂತೆ ನಿರ್ಬಂಧಿಸಿತು.
Central government discharges Puja Khedkar from Indian Administrative Service with immediate effect: Official sources
ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ದುಷ್ಕೃತ್ಯದ ಬಗ್ಗೆ ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಲಾಗಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ಪೂಜಾ ಖೇಡ್ಕರ್ ಅವರು CSE-2022 ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ ಎಂದು ಆಯೋಗ ತಿಳಿಸಿತ್ತು. ಖೇಡ್ಕರ್ ಅವರು ಇತರ ಹಿಂದುಳಿದ ವರ್ಗ (ಒಬಿಸಿ) ಮತ್ತು ಅಂಗವಿಕಲ ಕೋಟಾದ ಪ್ರಯೋಜನಗಳನ್ನು ತಪ್ಪಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಅಂಗವಿಕಲತೆ ತೋರಿಸಲು ಪೂಜಾ ಖೇಡ್ಕರ್ ಎರಡು ಪ್ರಮಾಣಪತ್ರಗಳನ್ನು ಪ್ರಸ್ತುತಪಡಿಸಿದ್ದಾರೆ. ಇವುಗಳಲ್ಲಿ ಒಂದು ನಕಲಿಯಾಗಿದ್ದರೆ ಇನ್ನೊಂದು ಕಪೋಲಕಲ್ಪಿತವಾಗಿರಬಹುದು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ದೆಹಲಿ ಹೈಕೋರ್ಟ್​​​ನಲ್ಲಿ ತಿಳಿಸಲಾಗಿದೆ. ಏಮ್ಸ್​​ನಲ್ಲಿ ತನ್ನ ಅಂಗವಿಕಲ ಪರೀಕ್ಷೆಗೆ ಸಿದ್ಧ ಎಂದು ಪೂಜಾ ಖೇಡ್ಕರ್​​ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪೂಜಾ ಖೇಡ್ಕರ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಈ ಹಿಂದೆ ನಾಗರಿಕ ಸೇವಾ ಪರೀಕ್ಷೆ(ಸಿಎಸ್​​ಇ)-2022ಕ್ಕೆ ತಾತ್ಕಾಲಿಕವಾಗಿ ಶಿಫಾರಸು ಮಾಡಲಾದ ಅಭ್ಯರ್ಥಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ದುಷ್ಕೃತ್ಯದ ಬಗ್ಗೆ ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಲಾಗಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ಪೂಜಾ ಖೇಡ್ಕರ್ ಅವರು CSE-2022 ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ ಎಂದು ಆಯೋಗ ತಿಳಿಸಿತ್ತು.(ಏಜೆನ್ಸೀಸ್​​)
ಅರ್ಜುನ್ ತೆಂಡೂಲ್ಕರ್ ‘ಕಲ್ಲಿದ್ದಲು’; ಸಚಿನ್​ ತೆಂಡೂಲ್ಕರ್​​ ಪುತ್ರನ ಬಗ್ಗೆ ಯುವಿ ತಂದೆ ಯೋಗರಾಜ್​ ಹೀಗೆಳಿದ್ದೇಕೆ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen + 18 =
Remember me
