ನವದೆಹಲಿ:ಬಿಲ್ಕಿಸ್​ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಿಗೆ ಕ್ಷಮಾಪಣಾ ನೀಡಿರುವ ಕುರಿತು ಸುಪ್ರೀಂ ಕೋರ್ಟ್​ಗೆ ದಾಖಲೆ ಸಲ್ಲಿಸುವುದಾಗಿ ಗುಜರಾತ್-ಕೇಂದ್ರ ಸರ್ಕಾರ ತಿಳಿಸಿದೆ.
2002ರಲ್ಲಿ ಗೋದ್ರಾ ಗಲಭೆ ವೇಳೆ ಬಿಲ್ಕಿಸ್​ ಬಾನೋ ಮೇಲೆ ಅತ್ಯಾಚಾರ ಎಸಗಿ ಹಾಗೂ ಆಕೆಯ ಕುಟುಂಬಸ್ಥರನ್ನು ಹತ್ಯೆಗೈದ 11 ಆರೋಪಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅವಧಿಗೂ ಮುನ್ನ ಆರೋಪಿಗಳಿಗೆ ಕ್ಷಮಾಪನಾ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಈ ವೇಳೆ ಗುಜರಾತ್​​ ಹಾಗೂ ಕೇಂದ್ರ ಪ್ರಕರಣದ 11 ಆರೋಪಿಗಳ ಬಿಡುಗಡೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿವೆ.
ಇದನ್ನೂ ಓದಿ:ಬಿಲ್ಕಿಸ್​ ಬಾನೊ ಪ್ರಕರಣ; ಗುಜರಾತ್​ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್​
ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸುವುದಾಗಿ ಹೇಳಿದ ನ್ಯಾಯಾಲಯವು ಮೇ 9ಕ್ಕೆ ಸಮಯ ನಿಗದಿಪಡಿಸುವುದಾಗಿ ಹೇಳಿದೆ. ವಿಚಾರಣೆಗೆ ಸಂಬಂಧಿಸಿದಂತೆ ಹೊಸ ಪೀಠವನ್ನು ರಚಿಸಸಲಾಗುವುದು ಎಂದು ಅರ್ಜಿದಾರರ ಪರ ವಕೀಲರಿಗೆ ತಿಳಿಸಿದೆ.
ಈ ಮೊದಲು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯಕ್ಕೆ ಆರೋಪಿಗಳಿಗೆ ಕ್ಷಮಾಧಾನ ನೀಡಿರುವ ಕುರಿತು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿತ್ತು. ಇದಕ್ಕೆ ಆಕ್ಷೇಪಿಸಿದ ಸರ್ಕಾರದ ಪರ ವಕೀಲರು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಾಧ್ಯ ಇಲ್ಲ ಎಂದು ಗುಜರಾತ್​ ಹಾಗೂ ಕೇಂದ್ರ ಸರ್ಕಾರ ತಿಳಿಸಿತ್ತು.
ನೀವು ಆರೋಪಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿರುವ ಬಗ್ಗೆ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಇಲ್ಲವಾದಲ್ಲಿ ನಾವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿರಬೇಕು ಎಂದು ಕೇಂದ್ರ-ಗುಜರಾತ್​ ಸರ್ಕಾರಕ್ಕೆ ನ್ಯಾಯಪೀಠ ಚಾಟಿ ಬೀಸಿತ್ತು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + fourteen =
Remember me
