ನವದೆಹಲಿ:ಅಗ್ನಿಪಥ ಯೋಜನೆಯಡಿ ನೇಮಕಾತಿ ನಡೆಸಲು ಭಾರತೀಯ ಸೇನೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಜುಲೈನಲ್ಲಿ ಆನ್​ಲೈನ್​ ನೋಂದಣಿ ಆರಂಭವಾಗಲಿದೆ ಎಂದು ತಿಳಿಸಿದೆ.
ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಗ್ನಿಪಥ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ನಿನ್ನೆಯಷ್ಟೇ ಸೇನಾ ಮುಖ್ಯಸ್ಥರು ಹೇಳಿಕೆ ನೀಡಿದ್ದರು. ಒಂದು ದಿನದ ಬೆನ್ನಲ್ಲೇ ಇದೀಗ ಅಧಿಸೂಚನೆ ಪ್ರಕಟಿಸಲಾಗಿದೆ.
ಯೋಜನೆ ವಿರೋಧಿಸಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಧಕ್ಕೆ ತಂದಿರುವವರನ್ನು ಆಯ್ಕೆಯಿಂದ ಹೊರಗಿಡಲಾಗುವುದು ಎಂದೂ ಕೂಡ ಹೇಳಿದ್ದರು. ಇದೀಗ ಅಧಿಸೂಚನೆಯಂತೆ ಜುಲೈ ತಿಂಗಳಲ್ಲೇ ನೋಂದಣಿ ಪ್ರಾರಂಭವಾಗಲಿದೆ.
ಹೊಸ ಮಾದರಿಯ ಸೇನಾ ನೇಮಕಾತಿಯಲ್ಲಿ ಉದ್ಯೋಗ ಆಕಾಂಕ್ಷಿಗಳು ವೆಬ್​ಸೈಟ್​​​ನಲ್ಲಿ ಆನ್​ಲೈನ್​ ನೋಂದಣಿ ಕಡ್ಡಾಯವಾಗಿದೆ. ಸೇನೆಯಲ್ಲಿ ಅಗ್ನಿವೀರರ ವಿಶಿಷ್ಟ ಶ್ರೇಣಿಯನ್ನು ರೂಪಿಸಲಾಗುವುದು, ಇದು ಈಗಿರುವ ಇತರೆ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ ಎಂದು ಸೇನೆ ತಿಳಿಸಿದೆ.(ಏಜೆನ್ಸೀಸ್​)
‘ಒಂದೂವರೆ ಲಕ್ಷ ಯುವಕರ ನೇಮಕ, ಒಂದು ಕೋಟಿ ರೂ. ಪರಿಹಾರ: ಗಲಭೆಕೋರರಿಗಿಲ್ಲ ಅವಕಾಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 13 =
Remember me
