ನವದೆಹಲಿ:ಅನ್​ಲಾಕ್​-0.5 ಹಂತದಲ್ಲಿ ಶಾಲೆ-ಕಾಲೇಜು ಪ್ರಾರಂಭಕ್ಕೆ ಅವಕಾಶ ನೀಡಿರುವ ಕೇಂದ್ರ ಸರ್ಕಾರ ಅದರ ನಿರ್ಧಾರವನ್ನು ಆಯಾ ರಾಜ್ಯ ಸರ್ಕಾರಗಳಿಗೇ ಬಿಟ್ಟಿದೆ.ಅಕ್ಟೋಬರ್​ 15ರ ನಂತರ ಶಾಲೆ ಪ್ರಾರಂಭಿಸಬಹುದು ಎಂದು ಹೇಳಿರುವ ಕೇಂದ್ರ ಸರ್ಕಾರ ಅದಕ್ಕೆ ಸಂಬಂಧಪಟ್ಟ ಮಾರ್ಗಸೂಚಿಯನ್ನು ಇಂದು ಬಿಡುಗಡೆ ಮಾಡಿದೆ.
ಇಂದು ಈ ಬಗ್ಗೆ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ, ಶಾಲೆ ಶುರು ಮಾಡುವ ಬಗ್ಗೆ ಆಯಾ ರಾಜ್ಯ, ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ಎಸ್​ಒಪಿ ತಯಾರಿಸಬೇಕು. ಅಲ್ಲಿನ ಪರಿಸ್ಥಿತಿಗನುಗುಣವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳು ಶಾಲೆಗೆ ಹೋಗುವ ಬಗ್ಗೆ ಸ್ವಯಂ ನಿರ್ಧಾರ ತೆಗೆದುಕೊಳ್ಳಬೇಕು. ಹಾಗೇ ಅವರ ಪಾಲಕರ ಲಿಖಿತ ಒಪ್ಪಿಗೆ ಇರಬೇಕು. ಅದರಲ್ಲೂ ಕಂಟೇನ್​ಮೆಂಟ್ ಝೋನ್​ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು, ಶಿಕ್ಷಕರಿಗೆ ಶಾಲೆಗೆ ಹಾಜರಾಗಲು ಅವಕಾಶ ಇಲ್ಲ. ವಿದ್ಯಾರ್ಥಿಗಳು ಆನ್​ಲೈನ್​ ಕಲಿಕೆಯನ್ನೂ ಆರಿಸಿಕೊಳ್ಳಬಹುದು. ಇದನ್ನೂ ಹಾಜರಾತಿಗೆ ಮಾನ್ಯ ಮಾಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಶಾಲಾ-ಕಾಲೇಜುಗಳಲ್ಲಿ ಕಾರ್ಯಪಡೆಗಳು ರಚನೆಯಾಗಬೇಕು. ತುರ್ತು ಆರೈಕೆ ತಂಡ, ಪ್ರತಿಕ್ರಿಯೆ/ಸಹಾಯ ನೀಡುವ ಫೋರ್ಸ್​, ಸ್ವಚ್ಛತಾ ತಂಡಗಳನ್ನು ರಚಿಸಿ ಜವಾಬ್ದಾರಿ ನೀಡಬೇಕು. ಮಕ್ಕಳು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆಗೆ ಸೂಕ್ತ ಯೋಜನೆ ರೂಪಿಸಿಕೊಂಡು, ಸಾಮಾಜಿಕ ನಿಯಮ ಅಂತರ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಹಾಗೇ, ಸಾಧ್ಯವಾದರೆ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಪ್ರತ್ಯೇಕವಾಗಿಸಿ. ಅದರಲ್ಲೂ ಪ್ರತ್ಯೇಕ ಸಮಯವನ್ನು ಅಳವಡಿಸಿ ಎಂದೂ ಮಾರ್ಗಸೂಚಿಯಲ್ಲಿ ಸಲಹೆ ನೀಡಲಾಗಿದೆ.
ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಿ, ಮಕ್ಕಳಿಗೆ ಬಡಿಸುವಾಗ ತೀವ್ರ ಮುನ್ನೆಚ್ಚರಿಕೆ ವಹಿಸಬೇಕು. ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ರಾಷ್ಟ್ರೀಯ ಮಂಡಳಿಯ ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್​ ಪಾಲನೆ ಮಾಡಬೇಕು.
ಶಾಲೆ ಶುರುವಾಗಿ 2-3 ವಾರದವರೆಗೂ ಯಾವುದೇ ಮೌಲ್ಯಮಾಪನ ಇರುವುದಿಲ್ಲ. ಐಸಿಟಿ (ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ) ಮತ್ತು ಆನ್​ಲೈನ್​ ಕಲಿಯನ್ನೇ ಪ್ರೋತ್ಸಾಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. (ಏಜೆನ್ಸೀಸ್)
Here are the highlights:
As per para -1 of@HMOIndia's order no. 40-3/2020-DM-I(A) dated 30.09.2020 for reopening, States/UT Governments may take a decision in respect of reopening of schools and coaching institutions after 15th Oct in a graded manner.#SchoolGuidelinespic.twitter.com/JLfJ97qJsF
— Dr. Ramesh Pokhriyal Nishank (@DrRPNishank)October 5, 2020

ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಕರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 2 =
Remember me
