ನವದೆಹಲಿ:ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ ಬೆನ್ನಲ್ಲೇ, ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಕ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕಾಗಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಹಾಗೂ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಸಲಹೆ ಬಯಸಿದ್ದಾರೆ.
ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಆನ್​ಲೈನ್​ ಶಿಕ್ಷಣ ವ್ಯವಸ್ಥೆಯಾಗಿ ರೂಪಿಸುವ ಮಹತ್ತರ ಉದ್ದೇಶ ಹೊಂದಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಅಗತ್ಯವೇ ಇರುವುದಿಲ್ಲ. ಜತೆಗೆ, ಶಿಕ್ಷಣ ಸಂಸ್ಥೆಗಳ ಮೇಲಿನ ಆರ್ಥಿಕ ಹೊರೆಯನ್ನು ಇದು ಕಡಿಮೆ ಮಾಡಲಿದೆ.
ಇದನ್ನೂ ಓದಿ;ಶ್ರೀಲಂಕಾದಲ್ಲಿ ಪೂರ್ಣಪ್ರಮಾಣದಲ್ಲಿ ಶುರುವಾಗಿವೆ ಶಾಲೆಗಳು; ನಿಯಮಗಳು ಹೀಗಿವೆ….
ಇದಷ್ಟೇ ಅಲ್ಲ, ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ ಹಾಗೂ ಐಐಎಂಗಳನ್ನು ಕೂಡ ಈ ಆನ್​ಲೈನ್​ ಶಿಕ್ಷಣ ವ್ಯವಸ್ಥೆಯ ಭಾಗವನ್ನಾಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಪ್ರಧಾನ ಮಂತ್ರಿ ಕಚೇರಿ ಹಾಗೂ ಹಾಗೂ ನೀತಿ ಆಯೋಗವು ಯುಜಿಸಿ ಹಾಗೂ ಎಐಸಿಟಿಇಗೆ ಸಲಹೆ ಹಾಗೂ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.
ಈ ನಿಟ್ಟಿನಲ್ಲಿ ನೀಲಿನಕ್ಷೆ ತಯಾರಿಸಲು ಎಐಸಿಟಿಇ ಅಧ್ಯಕ್ಷ ಅನಿಲ್​ ಸಹಸ್ರಬುದ್ಧೆ ಹಾಗೂ ಯುಜಿಸಿ ಉಪಾಧ್ಯಕ್ಷ ಡಾ. ಎಂ.ಪಿ. ಪೂನಿಯಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಭಾರತೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆನ್​ಲೈನ್​ ಶಿಕ್ಷಣ ಒದಗಿಸುವ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಡಿಜಿಟಲ್​ ವೇದಿಕೆಯನ್ನು ರೂಪಿಸುವ ಹೊಣೆ ನೀಡಲಾಗಿದೆ.
ಇದನ್ನೂ ಓದಿ;ಕಡತಗಳಿಗೆ ಸಹಿ ಹಾಕಲೆಂದೆ ಐಎಎಸ್ ಅಧಿಕಾರಿಯಾದೆ; ಅಪ್ಪನ ಕನಸು ನನಸಾದ ಸಾರ್ಥಕತೆ
ಎಲ್ಲ ವಿವಿಗಳ ಕುಲಪತಿಗಳು, ಶಿಕ್ಷಣ ಸಂಸ್ಥೆಗಳ ನಿರ್ದೇಶಕರಿಗೆ ಅನಿಲ್​ ಸಹಸ್ರಬುದ್ಧೆ ಇತ್ತೀಚೆಗೆ ಪತ್ರವೊಂದನ್ನು ಬರೆದಿದ್ದರು. ಸ್ವಾವಲಂಬಿ ಭಾರತಕ್ಕಾಗಿ ಶ್ರಮಿಸುವಂತೆ ಕರೆ ನೀಡಿದ್ದರು. ಶಿಕ್ಷಕರು, ವಿದ್ಯಾರ್ಥಿಗಳಿಗೆ ಪರ್ಯಾಯ ಆ್ಯಪ್, ಇತರ ಉತ್ಪನ್ನಗಳು ಹಾಗೂ ತಾಂತ್ರಿಕತೆಯನ್ನು ಅಭಿವೃದ್ಧಿಪಡಿಸಲು ಪ್ರೋತ್ಸಾಹಿಸಿ ಎಮದು ಸಲಹೆ ನೀಡಿದ್ದರು.
ಸೆ.1ರಿಂದ ಶಾಲಾ- ಕಾಲೇಜು ಆರಂಭ ಪ್ರಕ್ರಿಯೆ; ಅರ್ಧದಷ್ಟು ಮಕ್ಕಳು, ಶಿಕ್ಷಕರಿಗಷ್ಟೇ ಅವಕಾಶ; ಹೀಗಿರಲಿದೆ ಮಾರ್ಗಸೂಚಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
