ನವದೆಹಲಿ:ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಹಾಗೂ ಸಂತ್ರಸ್ತರಿಗೆ ಸಮಗ್ರ ಪುನರ್ವಸತಿ ಪ್ಯಾಕೇಜ್ ಒದಗಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಇದನ್ನು ಓದಿ:ಯುಪಿಎಸ್​ಸಿ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ ಮೊರೆ ಹೋದ ಪೂಜಾ ಖೇಡ್ಕರ್​​​​
ಕೆಲವು ದಿನಗಳ ಹಿಂದೆ ನಾನು ನನ್ನ ಸಹೋದರಿಯೊಂದಿಗೆ ವಯನಾಡಿಗೆ ಭೇಟಿ ನೀಡಿದ್ದೆ. ಈ ದುರಂತವು ಎಷ್ಟು ನೋವನ್ನು ಉಂಟುಮಾಡಿದೆ ಎಂದು ನಾನು ಪ್ರತ್ಯಕ್ಷವಾಗಿ ನೋಡಿದ್ದೇನೆ. 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಹೆಚ್ಚಿನ ಸಂಖ್ಯೆಯ ಜನರು ಕಾಣೆಯಾಗಿದ್ದಾರೆ. ಆದರೆ ಇಲ್ಲಿಯವರೆಗೂ ಮೃತಪಟ್ಟವರ ಸಂಖ್ಯೆ 400ಕ್ಕಿಂತ ಹೆಚ್ಚು ಎಂದು ನಿರೀಕ್ಷಿಸಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ, ನೌಕಾಪಡೆ, ಕೋಸ್ಟ್ ಗಾರ್ಡ್, ಅಗ್ನಿಶಾಮಕ ಇಲಾಖೆ ಮತ್ತು ಇತರರು ಮಾಡುತ್ತಿರುವ ಕೆಲಸ ಹಾಗೂ ಕರ್ನಾಟಕ, ತಮಿಳುನಾಡ, ತೆಲಂಗಾಣ ಸೇರಿ ನೆರೆಯ ರಾಜ್ಯಗಳು ನೀಡುತ್ತಿರುವ ಸಹಾಯವನ್ನು ಪ್ರಶಂಸಿಸುತ್ತೇನೆ. ಎಲ್ಲಾ ಸಮುದಾಯದವರು ಒಗ್ಗೂಡಿ ಸಹಾಯ ಮಾಡಿರುವುದು ಸಂತಸ ತಂದಿದೆ ಎಂದು ಸಂಸತ್ತಿಗೆ ರಾಹುಲ್ ಗಾಂಧಿ ತಿಳಿಸಿದರು.
ಸಮಗ್ರ ಪುನರ್ವಸತಿ ಪ್ಯಾಕೇಜ್ ಒದಗಿಸಬೇಕು. ಜನರು ಪಡೆಯುತ್ತಿರುವ ಪರಿಹಾರವನ್ನು ಹೆಚ್ಚಿಸಬೇಕು ಮತ್ತು ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳುತ್ತಿದ್ದೇನೆ ಎಂದು ಹೇಳಿದರು.
#WATCH| In Lok Sabha, LoP Rahul Gandhi says "I visited Wayanad with my sister some days back and I saw with my own eyes, the pain and suffering that resulted from this tragedy. More than 200 people are dead and a huge number of people are missing. I would like to commend the…pic.twitter.com/tISpvsHzlS
ಕೇರಳದ ಭೂಕುಸಿತ ಪೀಡಿತ ವಯನಾಡು ಪ್ರದೇಶದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಸತತ ಒಂಬತ್ತನೇ ದಿನವೂ ಮುಂದುವರೆದಿದೆ. ಜುಲೈ 30 ರಂದು ವಯನಾಡಿನ ಚುರಲಾಮಲಾ ಮತ್ತು ಮುಂಡಕ್ಕೈನಲ್ಲಿ ಭಾರೀ ಭೂಕುಸಿತ ಸಂಭವಿಸಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇದಲ್ಲದೇ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದೆ.(ಏಜೆನ್ಸೀಸ್​​)
ಅಲ್ಪಾವಧಿಗೆ ಭಾರತಕ್ಕೆ ಬರಲು ಅನುಮತಿ ಕೋರಿದ್ದ ಶೇಖ್ ಹಸೀನಾ: ಸಚಿವ ಎಸ್​.ಜೈಶಂಕರ್​​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 13 =
Remember me
