ನವದೆಹಲಿ:ಆನ್​ಲೈನ್​ ಬೆಟ್ಟಿಂಗ್​ ಪ್ಲಾಟ್​ಫಾರ್ಮ್​ಗಳ ಜಾಹೀರಾತುಗಳನ್ನು ಪ್ರಕಟಿಸುವ ವಿಚಾರವಾಗಿ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಕಡಿವಾಣ ಹೇರಿದೆ. ಒಂದು ವೇಳೆ ಜಾಹೀರಾತು ಪ್ರದರ್ಶನ ನಿಲ್ಲಿಸದಿದ್ದರೆ ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪತ್ರಿಕೆ, ಚಾನೆಲ್​, ಸಾಮಾಜಿಕ ಜಾಲತಾಣಗಳಲ್ಲಿ ಆನ್​ಲೈನ್​ ಬೆಟ್ಟಿಂಗ್​ ವಿಷಯದ ಕುರಿತ ಜಾಹೀರಾತುಗಳನ್ನು ತಕ್ಷಣವೇ ಪ್ರಸಾರ ಮಾಡುವುದನ್ನು ನಿಲ್ಲಿಸಬೇಕು. ಇದಲ್ಲದೆ ಪ್ರಮುಖ ಕ್ರೀಡಾಕೂಟಗಳಲ್ಲಿ ಆನ್​ಲೈನ್​ ಬೆಟ್ಟಿಂಗ್ ಕುರಿತಾದ ಜಾಹೀರಾತುಗಳನ್ನು ಹೆಚ್ಚಾಗಿ ಪ್ರಸಾರ ಮಾಡಲಾಗುತ್ತದೆ.
ಇದನ್ನೂ ಓದಿ:ಅಜಿತ್​ ನಮ್ಮ ಪಕ್ಷದ ನಾಯಕರು, ಎನ್​ಸಿಪಿಯಲ್ಲಿ ಯಾವುದೇ ಒಡಕಿಲ್ಲ: ಶರದ್​ ಪವಾರ್​
ಒಂದು ವೇಳೆ ಸರ್ಕಾರದ ಆದೇಶವನ್ನು ಪಾಲಿಸಲು ವಿಫಲವಾದಲ್ಲಿ ವಿವಿಧ ಕಾನೂನಿನಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಆದೇಶಿಸಲಾಗಿದೆ.
ಮುಂದಿನ ಕೆಲ ದಿನಗಳಲ್ಲಿ ಭಾರತದ ಆತಿಥ್ಯದಲ್ಲಿ ಪ್ರಮುಖ ಕ್ರೀಡಾಕೂಟಗಳು ನಡೆಯಲಿದ್ದು, ಈ ನಿಟ್ಟಿನಲ್ಲಿ ಆನ್​ಲೈನ್​ ಬೆಟ್ಟಿಂಗ್​ಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 3 =
Remember me
