ನವದೆಹಲಿ:ಎರಡು ವರ್ಷದ ಮಗುವನ್ನು ಎತ್ತಿಕೊಂಡು ಮನೆಗೆ ಮರಳುತ್ತಿದ್ದ ಮಹಿಳೆಯ ಸರ ದೋಚಲು ಯತ್ನಿಸಿದ ಸರಗಳ್ಳ, ಕೊನೆಗೆ ಆಕೆಗೆ ಇರಿದು ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಸಿಮ್ರಾನ್​ ಕೌರ್ ಎಂಬ 25 ವರ್ಷದ ಮಹಿಳೆ ಮೃತಪಟ್ಟಿದ್ದಾಳೆ. ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದ ಈ ಮಹಿಳೆಯ ಮೇಲೆ ದೆಹಲಿಯ ಆದರ್ಶನಗರ ಬಳಿ ರಾತ್ರಿ 9.30ರ ಸುಮಾರಿಗೆ ಸರಗಳ್ಳನೊಬ್ಬ ಎರಗಿ ಸರ ದೋಚಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಮಗು ಕೆಳಕ್ಕೆ ಬಿದ್ದಿದ್ದು, ಆಕೆ ಸರಗಳವನ್ನು ವಿರೋಧಿಸಿ ಆತನನ್ನು ತಳ್ಳಿದ್ದಳು. ಆಗ ಕಳ್ಳ ಬಿದ್ದಿದ್ದು, ಜತೆಗಿದ್ದ ಮತ್ತೊಬ್ಬ ಮಹಿಳೆಯೊಂದಿಗೆ ಈಕೆ ಆತನನ್ನು ಹಿಡಿಯಲು ಹೋದಾಗ, ಆತ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಅಲ್ಲಿಂದ ಓಡಿದ ಕಳ್ಳ ಕೆಲದೂರದಲ್ಲಿ ಇನ್ನೊಬ್ಬ ನಿಲ್ಲಿಸಿಕೊಂಡಿದ್ದ ಸ್ಕೂಟಿ ಏರಿ ಪರಾರಿಯಾಗಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.
ತೀವ್ರ ಇರಿತಕ್ಕೆ ಒಳಗಾಗಿದ್ದ ಸಿಮ್ರಾನ್​ಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ. ಕಳವು ಯತ್ನದ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯಾವಳಿಯ ತುಣುಕನ್ನು ಆಧರಿಸಿ ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಆನ್​ಲೈನ್​ ರಮ್ಮಿ ಆಟಕ್ಕೆ ಬ್ರೇಕ್​! ಇನ್ನು ಮುಂದೆ ಈ ರಾಜ್ಯದಲ್ಲಿ ಆನ್​ಲೈನ್​ ಜೂಜಾಡುವಂತಿಲ್ಲ


ಇಂಧನ ಬೆಲೆ ಇಳಿಸುವವರೆಗೆ ಹಾಲಿನ ದರ ಲೀಟರ್​ಗೆ 100 ರೂ! ಇದು ಹೊಸ ರೀತಿಯ ಪ್ರತಿಭಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + sixteen =
Remember me
