ರಾಂಚಿ:ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಶುಕ್ರವಾರ ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ:Paris Paralympics: ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಅವನಿ ಲೇಖರಾ! ಮೋನಾ ಅಗರ್ವಾಲ್​ಗೆ ಕಂಚು!
ಇಂದು ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸಮ್ಮುಖದಲ್ಲಿ ಚಂಪೈ ಸೊರೆನ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರಿದರು.  67 ವರ್ಷದ ಬುಡಕಟ್ಟು ನಾಯಕ ಬಿಜೆಪಿಗೆ ಸೇರ್ಪಡೆಯಾಗಿದ್ದು, ಜೆಎಂಎಂನ ಪ್ರಮುಖ ಮತದಾರರಾಗಿದ್ದ ಪರಿಶಿಷ್ಟ ಪಂಗಡದ ಮತಗಳನ್ನು ಸೆಳೆಯಲು ಕೇಸರಿ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ.
#WATCH| Ranchi: Former Jharkhand CM and BJP leader Champai Soren says, "I will work for the development of Jharkhand and we will stop infiltration from Bangladesh. I will fulfil whatever responsibilities the party will assign me"pic.twitter.com/Eww8vq677Y
— ANI (@ANI)August 30, 2024
ಶಿಬು ಸೊರೆನ್‌ಗೆ ಬರೆದ ಪತ್ರದಲ್ಲಿ ನನಗೆ ಕುಟುಂಬದಂತಿರುವ ಜೆಎಂಎಂ ಪಕ್ಷವನ್ನು ನಾನು ತೊರೆಯುತ್ತೇನೆ ಎಂದು ನಾನು ನನ್ನ ಕನಸಿನಲ್ಲಿಯೂ ಊಹಿಸಿರಲಿಲ್ಲ. ಹಿಂದಿನ ಘಟನೆಗಳು ಬಹಳ ನೋವಿನಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮಾಡಿತು. ಪಕ್ಷವು ತನ್ನ ತತ್ವದಿಂದ ವಿಮುಖವಾಗಿದೆ ಎಂದು ಹೇಳಲು ನನಗೆ ನೋವಾಗಿದೆ ಎಂದಿದ್ದಾರೆ.
ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಆಪ್ತರಾಗಿದ್ದ ಚಂಪೈ ಸೊರೆನ್ ಅವರು ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ)ಗೆ ರಾಜೀನಾಮೆ ನೀಡಿದ್ದರು ಮತ್ತು ಬುಡಕಟ್ಟು ಅಸ್ಮಿತೆ, ಅಸ್ತಿತ್ವ ಉಳಿಸಲು ಬಿಜೆಪಿಗೆ ಸೇರುವುದಾಗಿ ಹೇಳಿದ್ದರು.
ಹೇಮಂತ್ ಸೊರೇನ್ ಅವರ ಅನುಪಸ್ಥಿತಿಯಲ್ಲಿ ಚಂಪೈ ಅವರು ಸಿಎಂ ಆಗಿದ್ದರು. ಜನವರಿ 31 ರಂದು ಜಾರಿ ನಿರ್ದೇಶನಾಲಯದಿಂದ ಹೇಮಂತ್ ಸೊರೇನ್ ಅವರನ್ನು ಬಂಧಿಸುವ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದಾಗ, ಚಂಪೈ ಸೊರೇನ್ ಅವರನ್ನು ಸಿಎಂ ಆಗಿ ನೇಮಿಸಲಾಯಿತು. ಸೊರೇನ್ ಜೈಲಿನಲ್ಲಿರುವವರೆಗೂ ಅವರು ಸಿಎಂ ಆಗಿದ್ದರು. ಜೂನ್ 28 ರಂದು ಹೇಮಂತ್ ಸೊರೇನ್‌ಗೆ ಜಾಮೀನು ನೀಡಿದ ನಂತರ, ಜೆಎಂಎಂ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಸ್ಥಾನದಿಂದ ಕೆಳಗಿಳಿಯಬೇಕಾಯಿತು.
ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:15 − 2 =
Remember me
