ರಾಂಚಿ :ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ(ಜೆಎಂಎಂ) ಹಿರಿಯ ನಾಯಕ ಚಂಪೈ ಸೊರೆನ್ ಅವರು ತಮ್ಮ ಎಕ್ಸ್ ಪ್ರೊಫೈಲ್‌ನಿಂದ ಜೆಎಂಎಂ ಹೆಸರನ್ನು ತೆಗೆದುಹಾಕಿದ್ದಾರೆ. ಇದರೊಂದಿಗೆ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿ:ಗಲ್ಲಾಪೆಟ್ಟಿಗೆಯಲ್ಲಿ ತಂಗಲಾ ನ್ ಸದ್ದು..3ನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ?
ಜಾರ್ಖಂಡ್‌ನಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪಕ್ಷದ ನಾಯಕತ್ವದ ವಿರುದ್ಧ ಅವರು ಮುನಿಸಿಕೊಂಡಿದ್ದು, ಬಿಜೆಪಿಯತ್ತ ಹೆಜ್ಜೆ ಹಾಕುತ್ತಾರೆ ಎನ್ನಲಾಗುತ್ತಿದೆ. ಆದರೆ ಚಂಪೈ ಅವರು ಯಾವುದೇ ಪಕ್ಷಕ್ಕೆ ಸೇರಲ್ಲ ಎಂದು ಹೇಳುತ್ತಿದ್ದರೂ ಅವರು ಪಕ್ಷ ಬದಲಿಸುತ್ತಾರೆ ಎಂಬ ಮಾತುಗಳು ಜೋರಾಗಿ ಕೇಳಿಬರುತ್ತಿವೆ.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಬಂಧಿಸಲಾಗಿತ್ತು . ಅದರ ನಂತರ ಚಂಪೈ ಸೊರೆನ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ನಂತರ ಜೂ.28 ರಂದು ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆಯಾಗಿದ್ದರು. ಜುಲೈ 4 ರಂದು ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದರು. ಹೀಗಾಗಿ ಜು.3ರಂದು ಚಂಪೈ ಸಿಎಂ ಸ್ಥಾನಕ್ಕೆ ಒಲ್ಲದ ಮನಸ್ಸಿನಿಂದಲೇ ರಾಜೀನಾಮೆ ನೀಡಿದ್ದರು. ಆದರೆ, ರಾಜಕೀಯ ತಜ್ಞರ ಪ್ರಕಾರ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ಬದಲಿಸುವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗುತ್ತಿದೆ.
ಮುಂಬೈನಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡುವಾಗಲೇ ವೈದ್ಯೆ ಮೇಲೆ ಹಲ್ಲೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − thirteen =
Remember me
