ರಾಂಚಿ:ಮಹತ್ವದ ಬೆಳವಣಿಗೆ ಒಂದರಲ್ಲಿ ಜಾರ್ಖಂಡ್​ ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್​ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಹೇಮಂತ್​ ಸೊರೇನ್​ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಪಾಲರಿಗೆ ಚಂಪೈ ಸೊರೇನ್ ರಾಜೀನಾಮೆ ಪತ್ರ ನೀಡಿದ್ದು, ಮಾಜಿ ಮುಖ್ಯಮಂತ್ರಿ, ಜಾರ್ಖಂಡ್​ ಮುಕ್ತಿ ಮೋರ್ಚಾದ ಕಾರ್ಯಾಕಾರಿ ಅಧ್ಯಕ್ಷ ಹೇಮಂತ್​ ಸೊರೇನ್​ ನೂತನ ಸರ್ಕಾರವನ್ನು ರಚಿಸಲಿದ್ದಾರೆ. ಜೆಎಂಎಂ ಹಾಗೂ ಕಾಂಗ್ರೆಸ್​ ನೇತೃತ್ವದ ಸಮ್ಮಿಶ್ರ ಸರ್ಕಾರ ಜಾರ್ಖಂಡ್​ನಲ್ಲಿ ಅಧಿಕಾರದಲ್ಲಿದೆ.
#WATCH| Ranchi: After tendering his resignation to Governor, Jharkhand CM Champai Soren says "A few days ago, I was made the Chief Minister and I got the responsibility of the state. After Hemant Soren was back, our alliance took this decision and we chose Hemant Soren as our…pic.twitter.com/KDvagvXsEU
ಇದನ್ನೂ ಓದಿ:ನಟ ಸಿದ್ಧಾರ್ಥ್​ ಮೇಲೆ ವಾಮಾಚಾರ, ಜೀವ ಉಳಿಸುವುದಾಗಿ ಹೇಳಿ 50 ಲಕ್ಷ ರೂ. ಪಡೆದು ವಂಚನೆ; ಅಭಿಮಾನಿಯ ಪೋಸ್ಟ್​ ವೈರಲ್​
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿಯಲ್ಲಿ ಜಾರ್ಖಂಡ್​ ಮುಖ್ಯಮಂತ್ರಿಯಾಗಿದ್ದ ಹೇಮಂತ್​ ಸೊರೇನ್​ರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿತ್ತು. ಜಾರಿ ನಿರ್ದೇಶನಾಲಯ ಬಂಧಿಸುವ ಮೊದಲು ಹೇಮಂತ್ ಸೊರೇನ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ಇದೀಗ ಮತ್ತೊಮ್ಮೆ ಜಾರ್ಖಂಡ್​ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮುಂದಿನ ಕೆಲವೇ ತಿಂಗಳುಗಳಲ್ಲಿ ಚುನಾವಣೆ ನಡೆಯಲಿದ್ದು, ಅಧಿಕಾರಕ್ಕಾಗಿ ಬಿಜೆಪಿ, ಜೆಎಂಎಂ-ಕಾಂಗ್ರೆಸ್​ ಪಕ್ಷ ಅಧಿಕಾರಕ್ಕಾಗಿ ಸೆಣಸಾಡಲಿದೆ. ಹೇಮಂತ್ ಸೊರೆನ್ ಅವರನ್ನು ತನ್ನ ಮುಖವಾಗಿಟ್ಟುಕೊಂಡು ಚುನಾವಣೆ ಎದುರಿಸಲು ಜೆಎಂಎಂ ನೋಡುತ್ತಿದೆ. ಆದರೆ ಚಂಪೈ ಸೊರೇನ್ ಅವರನ್ನು ಬದಲಾವಣೆಯ ಲಾಭವನ್ನು ಪಡೆಯಲು ಬಿಜೆಪಿ ಮುಂದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
