ಚಂಡೀಗಢ:ಹೃದಯ ವಿದ್ರಾವಕ ಘಟನೆಯೊಂದರಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹರಿಯಾಣದ ರಾಜಧಾನಿ ಚಂಡೀಗಢದ ಮಣಿ ಮಜ್ರಾ ಎಂಬ ಪ್ರದೇಶದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಜಸ್ಮೀತ್​ (10) ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಾಲಕಿ ತಂದೆ ಹರ್​ದೇವ್​ ಸಿಂಗ್​, ಶಾಲೆಯಿಂದ ಮೆನೆಗೆ ಬಂದ ಬಳಿಕ ನನ್ನ ಮಗಳು ತನ್ನ ಸ್ನೇಹಿತರೊಂದಿಗೆ ಆಟವಾಡಲೆಂದು ಪಾರ್ಕಿಗೆ ತೆರಳಿದ್ದಳು. ಆಟವಾಡುತ್ತಿದ್ದ ವೇಳೆ ಆಕೆಯ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಇದರಿಂದ ಭಯಗೊಂಡ ಆಕೆ ಓಡಲು ಶುರು ಮಾಡಿದ್ದು, ಹೃದಯಾಘಾತವಾಗಿ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಇಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಅನೇಕರನ್ನು ಕಚ್ಚಿ ಗಾಯಗೊಳಿಸಿವೆ. ಈ ಬಗ್ಗೆ ಸ್ಥಳೀಯಾಡಳಿತ ಹಾಗೂ ಅಧಿಕಾರಿಗಳಿಗೆ ಅನೇಕ ಬಾರಿ ದೂರು ನೀಡಿದ್ದೇವೆ. ಆದರೆ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಇಂದು ನಮ್ಮ ಮಗು ಮೇಲಾಗಿರುವುದು ನಾಳೆ ಇನ್ನೊಬ್ಬರ ಮಕ್ಕಳ ಮೇಲಾಗಬಹುದು. ಹಾಗಾಗುವುದಕ್ಕಿಂತ ಮುಂಚೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಾಲಕಿ ತಂದೆ ಹರ್​ದೇವ್​ ಸಿಂಗ್ ಆಗ್ರಹಿಸಿದ್ದಾರೆ.
In another heart-wrenching incident, a 10-year-old girl died after suffering a panic attack as stray dogs chased her while she was playing outside her house in Manimajra. The family said that when they took her to the hospital, the doctors declared her dead. The little girl was…pic.twitter.com/xErsfPsbg2
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight + sixteen =
Remember me
