ನವದೆಹಲಿ:ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. ಚರ್ಚೆ ರಚನಾತ್ಮಕವಾಗಿತ್ತು ಎಂದು ಬಾಬು ಹೇಳಿದರು.
ಇದನ್ನೂ ಓದಿ:ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ದೆಹಲಿಯ ಆಸ್ಪತ್ರೆಯಿಂದ ಬಿಡುಗಡೆ
ಪ್ರಧಾನ ಮಂತ್ರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲಾಗಿ ಹೆಚ್ಚಿನ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದರು. ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಪ್ರಧಾನಿ ಮೋದಿ ಮುಂದಿಟ್ಟು ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು ಎಂದು ಮೂಲಗಳು ತಿಳಿಸಿವೆ.
Today, I had a constructive meeting with the Hon'ble Prime Minister, Shri@narendramodiJi, in Delhi to address important matters concerning the welfare and development of Andhra Pradesh. I am confident that under his leadership, our State will re-emerge as a powerhouse among…pic.twitter.com/T8LJMK0DpC
— N Chandrababu Naidu (@ncbn)July 4, 2024

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಆಂಧ್ರಪ್ರದೇಶವು ಬಲಿಷ್ಠ ರಾಜ್ಯವಾಗಿ ಮತ್ತೆ ಹೊರಹೊಮ್ಮಲಿದೆ ಎನ್ನುವ ವಿಶ್ವಾಸವನ್ನು ಸಭೆಯ ಬಳಿಕ ಬಾಬು ಅವರ ವಿಶ್ವಾಸ ವ್ಯಕ್ತಪಡಿಸಿದರು.
Thank you, Union Minister@PiyushGoyalJi. This wonderful spirit of cooperative federalism will help our State, Andhra Pradesh, unlock its full potential. It was a pleasure meeting you in Delhi today!https://t.co/JeqSml1z0F
— N Chandrababu Naidu (@ncbn)July 4, 2024

ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಜೊತೆ ರಚನಾತ್ಮಕ ಸಭೆ ನಡೆಸಿದ್ದೇನೆ. ಆಂಧ್ರಪ್ರದೇಶದ ಅಭಿವೃದ್ಧಿ ಹಾಗೂ ಕಲ್ಯಾಣದ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಿತು. ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶ ಮತ್ತೆ ಶಕ್ತಿಶಾಲಿ ಹೊರಹೊಮ್ಮಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ನಾರಾ ಚಂದ್ರಬಾಬು ನಾಯ್ಡು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
I also met with Union Minister@nitin_gadkariJi in Delhi today to discuss 𝙉𝙖𝙩𝙞𝙤𝙣𝙖𝙡 𝙃𝙞𝙜𝙝𝙬𝙖𝙮 𝙥𝙧𝙤𝙟𝙚𝙘𝙩𝙨 𝙞𝙣 our State. I'm confident that together, we shall take Andhra Pradesh further on the road to progress and prosperity.https://t.co/VF0AJ6C8zJ
— N Chandrababu Naidu (@ncbn)July 4, 2024

ಉಭಯ ನಾಯಕರ ಭೇಟಿಯನ್ನು ಪ್ರಧಾನ ಮಂತ್ರಿ ಕಚೇರಿ ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿಯ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ಶಿವರಾಜ್​ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ್ದಾರೆ.
ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರೋಗ್ಯ ಸಚಿವ ಜೆಪಿ ನಡ್ಡಾ ಅವರೊಂದಿಗಿನ ಸಭೆಗಳು ನಾಯ್ಡು ಅವರ ಕಾರ್ಯಸೂಚಿಯಲ್ಲಿವೆ ಎಂದು ಮೂಲಗಳು ಸೂಚಿಸಿವೆ.
ಜಾರ್ಖಂಡ್ ಮುಖ್ಯಮಂತ್ರಿಯಾಗಿ ಸೊರೇನ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
