ನವದೆಹಲಿ:18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದರೂ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಸದ್ಯದ ಮಟ್ಟಿಗೆ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಎನ್​ಡಿಎ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದರ ಬೆನ್ನಲ್ಲೇ ಚಂದ್ರಬಾಬು ನಾಯ್ಡು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್​ ಆಗಿದೆ.
ದೇಶದ ಹಿತಕ್ಕೆ ಅಗತ್ಯವಿರುವ ಸಹಕಾರ ಒಕ್ಕೂಟ ಸರ್ಕಾರದ ರಚನೆಗಾಗಿ ಹೋರಾಡುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ನರೇಂದ್ರ ಮೋದಿಗಿಂತ ಉತ್ತಮರು ಎಂದು ಚಂದ್ರಬಾಬು ನಾಯ್ಡು ನೀಡಿರುವ ಹೇಳಿಕೆ ಸಖತ್​ ವೈರಲ್​ ಆಗಿದೆ. ಆದರೆ, ಈ ವಿಡಿಯೋ 2018-19ರಲ್ಲಿ ಚಂದ್ರಬಾಬು ನಾಯ್ಡು ಬಿಜೆಪಿಯೊಂದಿಗೆ ಸಂಬಂಧ ಕಡಿದುಕೊಂಡಾಗ ನೀಡಲಾಗಿದ್ದ ಹೇಳಿಕೆ ಎಂದು ತಿಳಿದು ಬಂದಿದೆ.
An year ago but he is speaking the truth . ‘All leaders are better than Narendra Modi’pic.twitter.com/7izXrOG72U
ಇದನ್ನೂ ಓದಿ:ಶಿವರಾಜ್​ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಬಹುದು: ಗೀತಾ ಸೋಲಿಗೆ ಕುಮಾರ್​ ಬಂಗಾರಪ್ಪ ವ್ಯಂಗ್ಯ
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ, ಒಂದು ಕಾಲದಲ್ಲಿ ಸೃಷ್ಟಿಯಾಗಿದ್ದ ರಾಜಕೀಯ ಒತ್ತಡದಿಂದಾಗಿ ನಾವು ಬಿಜೆಪಿ ಸೇರಿದ್ದೆವು. ಆದರೆ ದೇಶದಲ್ಲಿ ಇಂದು ಪ್ರಜಾಪ್ರಭುತ್ವಕ್ಕೆ ಒತ್ತಡ ಸೃಷ್ಟಿಯಾಗಿದೆ. ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳ ಮೂಲತತ್ವವನ್ನೇ ನಾಶ ಮಾಡಲಾಗಿದೆ. ಭಾರತ ಒಂದು ಅದ್ಭುತ ರಾಷ್ಟ್ರ. ನಮ್ಮದು ಜಾತ್ಯಾತೀತ ಪಕ್ಷ. ಈ ದೇಶದಲ್ಲಿರುವುದು ಮತ್ತು ಇರಬೇಕಿರುವುದು ಸಹಕಾರ ಇರುವ ಒಕ್ಕೂಟದ ಸರ್ಕಾರ. ದೇಶದ ಇತಿಹಾಸ ಗಮನಿಸಿದರೆ, ಚುನಾವಣೆ ಫಲಿತಾಂಶದ ನಂತರವೇ ಪ್ರಧಾನಿಯ ಆಯ್ಕೆಯಾಗುತ್ತದೆ. ಬಿಜೆಪಿಯನ್ನು ವಿರೋಧಿಸುತ್ತಿರುವ ಎಲ್ಲಾ ಪಕ್ಷಗಳ ಮುಖಂಡರೂ, ಮೋದಿಗಿಂತ ಹೆಚ್ಚು ಸಮರ್ಥರು ಎಂದು ಪ್ರತಿಭಟನೆ ವೇಳೆ ಚಂದ್ರಬಾಬು ನಾಯ್ಡು ಹೇಳಿದ್ದರು.
2024ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಈ ವಿಡಿಯೋ ವೈರಲ್​ ಆಗಿದ್ದು, ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಚಂದ್ರಬಾಬಯು ನಾಯ್ಡು ಆಪ್ತರು ಎನ್‌ಡಿಎ ಜತೆಗೇ ಇರುವುದಾಗಿ ನಹೇಳುವ ಮೂಲಕ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಆಂಧ್ರಪ್ರದೇಶದಲ್ಲಿ ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಈ ಬಾರಿ ಭರ್ಜರಿ ಕಮ್​ಬ್ಯಾಕ್​ ಮಾಡಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯುವ ಜತೆಗೆ ಲೋಕಸಭಾ ಚುನಾವಣೆಯಲ್ಲೂ ಗಮನಸೆಳೆದಿದೆ. ರಾಷ್ಟ್ರರಾಜಕೀಯದ ಮಹಾ ಸಮರದಲ್ಲಿ ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಹಾಗೂ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರು ಕಿಂಗ್‌ ಮೇಕರ್‌ಗಳಾಗಿ ಹೊರಹೊಮ್ಮಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + three =
Remember me
