ಅಮರಾವತಿ:ಕೌಶಲ್ಯಭಿವೃದ್ದಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನವನ್ನು ಖಂಡಿಸಿರುವ ಪುತ್ರ ನಾರಾ ಲೋಕೇಶ್​ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ವಿರುದ್ಧ ಹರಿಹಾಯ್ದಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೊಹನ್​ ರೆಡ್ಡಿ ಒಬ್ಬ ಸೈಕೋ ಎಂದು ಕರೆದಿರುವ ನಾರಾ ಲೋಕೇಶ್ ನಮ್ಮ ಕುಟುಂಬದ ವಿರುದ್ಧ​ ಅವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ.
Former Andhra Pradesh CM & TDP chief's son Nara Lokesh says, "Corruption is not in Chandrababu's blood. He is a well-known personality in the country. Jagan (Andhra Pradesh CM) put former CM Chandrababu in jail intentionally, on false charges. all other political leaders called…pic.twitter.com/8jcN2Gzi2Z
ಇದನ್ನೂ ಓದಿ:ಜಿ20 ಶೃಂಗಸಭೆ ಮುಗಿದಿದೆ, ಪ್ರಧಾನಿ ಮೋದಿ ಆಡಳಿತದತ್ತ ಗಮನ ಹರಿಸಲಿ: ಮಲ್ಲಿಕಾರ್ಜುನ ಖರ್ಗೆ
ಭ್ರಷ್ಟಾಚಾರ ಚಂದ್ರಬಾಬು ನಾಯ್ಡು ಅವರ ರಕ್ತದಲ್ಲಿಲ್ಲ, ಅವರು ದೇಶದ ಪ್ರತಿಷ್ಠಿತ ರಾಜಕೀಯ ನಾಯಕರಲ್ಲಿ ಒಬ್ಬರು. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಉದ್ದೇಶಪೂರ್ವಕವಾಗಿ ನಮ್ಮ ತಂದೆಯವರನ್ನು ಜೈಲಿಗೆ ಹಾಕಿಸಿದ್ದಾರೆ. ಬೇರೆ ಬೇರೆ ರಾಜಕೀಯ ಪಕ್ಷದ ನಾಯಕರು ನನಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ಇದರಲ್ಲೇ ಗೊತ್ತಾಗುತ್ತದೆ ಅವರು ಮಹಾನ್​ ವ್ಯಕ್ತಿತ್ವವುಳ್ಳವರು ಎಂದು.
ಜಗನ್​ ಮೋಹನ್​ ರೆಡ್ಡಿಯವರೇ ನಿಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ನಾನು ಜನರಿಗೆ ಹೇಳಬಹುದೇ. ವಿವೇಕಾನಂದ ಹತ್ಯೆ ಪ್ರಕರಣದಲ್ಲಿ ಕಡಪ ಸಂಸದ ಅವಿನಾಶ್​ ರೆಡ್ಡಿ ನಿಮ್ಮನ್ನು ರಕ್ಷಿಸಿದ್ದುಕ ಸುಳ್ಳಾ. ಜಗನ್​ ಮೋಹನ್​ ರೆಡ್ಡಿ ನಮ್ಮ ಕುಟುಂಬದ ವಿರುದ್ಧ​ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನಾರಾ ಲೋಕೇಶ್​ ಕಿಡಿಕಾರಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:17 + fourteen =
Remember me
