ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೈಗೊಂಡಿರುವ ಮತ್ತೊಂದು ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-3 ಇಂದು ಇನ್ನೊಂದು ಮಹತ್ವದ ಮಜಲನ್ನು ತಲುಪಿದೆ. ಈ ಕುರಿತು ಇಸ್ರೋದ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಚಂದ್ರಯಾನ-3 ಇಂದು ರಾತ್ರಿ 7.15 ನಿಮಿಷಕ್ಕೆ ಸರಿಯಾಗಿ ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಸೇರಿಕೊಂಡಿದೆ ಎಂಬುದಾಗಿ ಇಸ್ರೋ, ಆ ಕುರಿತ ಫೋಟೋವೊಂದರ ಸಹಿತ ಮಾಹಿತಿ ಹಂಚಿಕೊಂಡಿದೆ.
ಚಂದ್ರಯಾನ-3ಗೆ ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್‌ಎಲ್‌ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನ ಲ್ಯಾಂಡರ್ ವಿಕ್ರಮ್ ಕೂರಿಸಿ ಅದಕ್ಕೆ ಲಾಂಚ್ ವೆಹಿಕಲ್ ಮಾರ್ಕ್ 3 (LM-3) ಎಂದು ಮರುನಾಮಕರಣ ಮಾಡಲಾಗಿತ್ತು.
ಚಂದ್ರಯಾನ-3ರ ಈ ಬಾಹ್ಯಾಕಾಶ ನೌಕೆಯನ್ನು ಜುಲೈ 14ರಂದು ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿತ್ತು. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ಚಂದ್ರಯಾನ-3 ಆಗಸ್ಟ್ 23ರಂದು ಪೂರ್ಣಗೊಳ್ಳಲಿದೆ. ಮೊದಲ ಚಂದ್ರಯಾನ 2008ರಲ್ಲಿ ನಡೆದಿದ್ದು, ಚಂದ್ರಯಾನ-2 2019ರಲ್ಲಿ ಆಗಿತ್ತು.
Chandrayaan-3 Mission:“MOX, ISTRAC, this is Chandrayaan-3. I am feeling lunar gravity 🌖”🙂
Chandrayaan-3 has been successfully inserted into the lunar orbit.
A retro-burning at the Perilune was commanded from the Mission Operations Complex (MOX), ISTRAC, Bengaluru.
The next…pic.twitter.com/6T5acwiEGb
— ISRO (@isro)August 5, 2023

ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?

ಇನ್ನು ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ದಾಖಲೆ; ಸಂಸತ್ತಲ್ಲಿ ಮಹತ್ವದ ಮಸೂದೆ ಅಂಗೀಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
