ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೈಗೊಂಡಿರುವ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದ್ದು, ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
ಸೌತ್ ಆಫ್ರಿಕದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಇಸ್ರೋ ನೇರ ಪ್ರಸಾರದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ವಿಜ್ಞಾನಿಗಳನ್ನು ಹಾಗೂ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದು, ಈ ಕ್ಷಣ ಅಭೂತಪೂರ್ವ ಎಂದು ಬಣ್ಣಿಸಿ, ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ.
ಇದನ್ನೂ ಓದಿ:‘ಚಂದ್ರಯಾನ-3’ ಯಶಸ್ಸಿನ ಬೆನ್ನಲ್ಲೇ ಇಸ್ರೋ ಮುಖ್ಯಸ್ಥರಿಗೆ ಕರೆ ಮಾಡಿದ ಪ್ರಧಾನಿ ಮೋದಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವರು ಚಂದ್ರಯಾನ-3ರ ಯಶಸ್ಸಿಗೆ ಸಂತೋಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು: ಚಂದ್ರಯಾನ-3ರ ಯಶಸ್ಸಿಗೆ ಮೆಚ್ಚಿ ಧನ್ಯವಾದ ತಿಳಿಸಿದ ಪ್ರಕಾಶ್ ರಾಜ್​
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ.ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ.ಇಂಥದ್ದೊಂದು…pic.twitter.com/TQMzAHF5r9— CM of Karnataka (@CMofKarnataka)August 23, 2023
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ.ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ.ಇಂಥದ್ದೊಂದು…pic.twitter.com/TQMzAHF5r9
ಚಂದ್ರನ ದಕ್ಷಿಣ ಧ್ರುವ ತಲುಪುವ ಚಂದ್ರಯಾನ-3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ಅಧ್ಯಕ್ಷರಾದ ಶ್ರೀ ಎಸ್. ಸೋಮನಾಥ್ ಹಾಗೂ ಅವರ ತಂಡವನ್ನು ಅಭಿನಂದಿಸಿದೆ. ಮಹತ್ವಾಕಾಂಕ್ಷೆಯ ಈ ಯೋಜನೆಯ ಮೂಲಕ ಭಾರತದ ವಿಶ್ವಾಸ ಚಂದ್ರನ ಅಂಗಳವನ್ನು ತಲುಪಿದೆ. ನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ ತಲುಪಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಸ ಹಂಚಿಕೊಂಡಿದ್ದಾರೆ.
ಚಂದ್ರನ ದಕ್ಷಿಣ ಧೃವ ತಲುಪುವ ಚಂದ್ರಯಾನ 3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ಅಧ್ಯಕ್ಷರಾದ ಶ್ರೀ ಎಸ್. ಸೋಮನಾಥ್ ಹಾಗೂ ಅವರ ತಂಡವನ್ನು ಅಭಿನಂದಿಸಿದೆ. ಮಹತ್ವಾಕಾಂಕ್ಷೆಯ ಈ ಯೋಜನೆಯ ಮೂಲಕ ಭಾರತದ ವಿಶ್ವಾಸ ಚಂದ್ರನ ಅಂಗಳವನ್ನು ತಲುಪಿದೆ. ನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ…pic.twitter.com/db82czaDpa— DK Shivakumar (@DKShivakumar)August 23, 2023
ಚಂದ್ರನ ದಕ್ಷಿಣ ಧೃವ ತಲುಪುವ ಚಂದ್ರಯಾನ 3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ಅಧ್ಯಕ್ಷರಾದ ಶ್ರೀ ಎಸ್. ಸೋಮನಾಥ್ ಹಾಗೂ ಅವರ ತಂಡವನ್ನು ಅಭಿನಂದಿಸಿದೆ. ಮಹತ್ವಾಕಾಂಕ್ಷೆಯ ಈ ಯೋಜನೆಯ ಮೂಲಕ ಭಾರತದ ವಿಶ್ವಾಸ ಚಂದ್ರನ ಅಂಗಳವನ್ನು ತಲುಪಿದೆ. ನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ…pic.twitter.com/db82czaDpa
ಮೈನವಿರೇಳಿಸುವ ಕ್ಷಣ. ಚಂದ್ರಯಾನ-3ರ ಯಶಸ್ವಿಯನ್ನು ವೀಕ್ಷಿಸಿ ಸಂಭ್ರಮಿಸಿದ ಅದ್ಭುತ ಕ್ಷಣ. ಇಂದು ರಾಜಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಚಂದ್ರಯಾನದ ಯಶಸ್ವಿ ಲ್ಯಾಂಡಿಂಗ್ ಪ್ರಕ್ರಿಯೆ ವೀಕ್ಷಿಸಿ ನಿಜಕ್ಕೂ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಇಸ್ರೋ ವಿಜ್ಞಾನಿಗಳ ನಿರಂತರ ಪರಿಶ್ರಮಕ್ಕೆ ಬಿಗ್ ಸೆಲ್ಯೂಟ್ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
A moment to remember foreverWitnessed the historical moment of Vikram Lander's soft landing on the moon with the party karyakartas in Rajasthan.This phenomenal achievement is the result of#ISROscientists' exceptional efforts.ಮೈನವಿರೇಳಿಸುವ ಕ್ಷಣ 🇮🇳😍ಚಂದ್ರಯಾನ-3 ರ…pic.twitter.com/j37ckmZ6sH— Pralhad Joshi (@JoshiPralhad)August 23, 2023
A moment to remember foreverWitnessed the historical moment of Vikram Lander's soft landing on the moon with the party karyakartas in Rajasthan.This phenomenal achievement is the result of#ISROscientists' exceptional efforts.ಮೈನವಿರೇಳಿಸುವ ಕ್ಷಣ 🇮🇳😍ಚಂದ್ರಯಾನ-3 ರ…pic.twitter.com/j37ckmZ6sH
ಚಂದ್ರಯಾನ-3ರ ಯಶಸ್ಸು ಪ್ರತಿಯೊಬ್ಬ ಭಾರತೀಯರ ಯಶಸ್ಸು. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಆ ಐತಿಹಾಸಿಕ ಕ್ಷಣಗಳನ್ನು ನಾನು ಕುತೂಹಲದಿಂದ ಕಣ್ತುಂಬಿಕೊಂಡ ಕ್ಷಣ. ದೇಶವನ್ನೇ ಸಂತಸ ಹಾಗೂ ಹೆಮ್ಮೆಯ ಕಡಲಲ್ಲಿ ತೇಲಿಸಿದ ಇಸ್ರೋ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳು ಮತ್ತು ಹಾರ್ದಿಕ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಯಶಸ್ವಿಯಾದ ಚಂದ್ರಯಾನ-3 ಲ್ಯಾಂಡರ್; ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶ ಭಾರತ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + seven =
Remember me
