ಬೆಂಗಳೂರು:ಈ ವರ್ಷದ ಆಗಸ್ಟ್​ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಜ್ಜಾಗುತ್ತಿದೆ.
ಚಂದ್ರಯಾನ-2 ಕಾರ್ಯಾಚರಣೆಯಲ್ಲಿ ಚಂದ್ರನ ಮೇಲ್ಮೆ ಮೇಲೆ ರೋವರ್​ ಸರಾಗವಾಗಿ ಲ್ಯಾಂಡ್​ ಆಗದೆ ವಿಲವಾದ ಎರಡು ವರ್ಷಗಳ ನಂತರ ಚಂದ್ರಯಾನ-3 ಉಡಾವಣೆಗೆ ಇಸ್ರೋ ಸಿದ್ಧತೆ ನಡೆಸಿದೆ. ಚಂದ್ರಯಾನ-2 ಮಿಷನ್​ನ ವೈಲ್ಯಗಳು ಹಾಗೂ ಜಾಗತಿಕ ತಜ್ಞರ ಸಲಹೆಗಳನ್ನು ಆಧರಿಸಿ 3ನೇ ಯಾನಕ್ಕೆ ಅಗತ್ಯ ತಯಾರಿ ನಡೆಸಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.
ಯೋಜನೆ ಪ್ರಕಾರ 2020ರಲ್ಲೇ ಚಂದ್ರಯಾನ-3 ಉಡಾವಣೆ ಆಗಬೇಕಿತ್ತು. ಆದರೆ ಕರೊನಾ ಹಾಗೂ ಲಾಕ್​ಡೌನ್​ ಕಾರಣಗಳಿಂದ ಅದನ್ನು ಮುಂದಕ್ಕೆ ಹಾಕಲಾಗಿತ್ತು. ಬಾಹ್ಯಾಕಾಶ ಕ್ಷೇತ್ರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಚಂದ್ರಯಾನ-3 ಪರಿಕರಗಳಲ್ಲಿ ಕೆಲವು ಮಾರ್ಪಾಡುಗಳೊಂದಿಗೆ ಕಾರ್ಯಾಚರಣೆ ನಡೆಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eight =
Remember me
