ಡೆಹ್ರಾಡೂನ್​:ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಉತ್ತರಾಖಂಡ ಭಾರಿ ಮಳೆಗೆ ತತ್ತರಿಸಿದೆ. ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು, ಅಪಾಯಕಾರಿಯಾಗಿ ಪರಿಣಮಿಸಿವೆ. ಹಲವೆಡೆ ಭೂಕುಸಿತ ಸಂಭವಿಸಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:ಹಳದಿ ಬಿಕಿನಿ ತೊಟ್ಟ ಮಲ್ಲಿಕಾ ಶೆರಾವತ್ ..ಅಭಿಮಾನಿಗಳು ಫಿದಾ!
ಗರ್ವಾಲ್ ಪ್ರದೇಶದಲ್ಲಿ ಭಾನುವಾರ(ಜು.7) ಮತ್ತು ಸೋಮವಾರ(ಜು.8) ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹೀಗಾಗಿ ಚಾರ್ಧಾಮ್ ಯಾತ್ರೆ ಮುಂದೂಡಲಾಗಿದೆ ಎಂದು ಗರ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಚಮೋಲಿ ಜಿಲ್ಲೆಯಲ್ಲಿ ಬದರಿನಾಥಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದೆ. ಇದರಿಂದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಸರ್ಕಾರ ಆದೇಶ ಹೊರಡಿಸಿದೆ.
ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜಾಗರೂಕರಾಗಿರಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾಲಕಾಲಕ್ಕೆ ಪರಿಸ್ಥಿತಿಯ ಮೇಲೆ ನಿಗಾ ಇಡುವಂತೆ ಆದೇಶಿಸಿದ್ದಾರೆ.
ಈಕೆ ನಿತ್ಯ ಮದುಮಗಳು.. ಎಷ್ಟು ಮದುವೆಯಾಗಿದ್ದಾಳೆ ಗೊತ್ತಾ? ಡಿವೈಎಸ್ಪಿ, ಎಸ್ಪಿ ಸಹ ಪತಿಗಳಾಗಿದ್ದವರೇ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − three =
Remember me
