ಚೆನ್ನೈ:ತಮಿಳುನಾಡು ರಾಜಧಾನಿ ಚೆನ್ನೈ ಮೂಲದ ನವವಿವಾಹಿತ ಜೋಡಿಯೊಂದು ಹನಿಮೂನ್​ ಪ್ರವಾಸದ ವೇಳೆ ದುರಂತ ಸಾವಿಗೀಡಾಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.
ಮೃತರನ್ನು ಡಾ. ಲೋಕೇಶ್ವರನ್​ ಮತ್ತು ಡಾ. ವಿಬುಷ್ನಿಯಾ ಎಂದು ಗುರುತಿಸಲಾಗಿದೆ. ಇಬ್ಬರು ಕೂಡ ವೈದ್ಯರಾಗಿದ್ದರು. ಇತ್ತೀಚೆಗಷ್ಟೇ ಮದುವೆಯಾಗಿದ್ದರು. ಹನಿಮೂನ್​ಗೆಂದು ಇಂಡೋನೇಷ್ಯಾದ ಬಾಲಿ ದ್ವೀಪಕ್ಕೆ ತೆರಳಿದ್ದರು. ಫೋಟೋಗೆ ಪೋಸ್​ ಕೊಡುವ ವೇಳೆ ಇಬ್ಬರು ನೀರುಪಾಲಾಗಿದ್ದಾರೆ.
ಇದನ್ನೂ ಓದಿ:ಡೇಟಿಂಗ್​​ ಆ್ಯಪ್​ನಲ್ಲಿ ಪರಿಚಯವಾದ ಯುವಕನನ್ನು ನಂಬಿ ದೇಹ ಅರ್ಪಿಸಿದ ಯುವತಿಗೆ ಸಾಲು ಸಾಲು ಆಘಾತ!
ಜೂನ್​ 1ರಂದು ಮದುವೆಯಾದ ಲೋಕೇಶ್ವರನ್ ಮತ್ತು ವಿಬುಷ್ನಿಯಾ ತಮ್ಮ ಹೊಸ ಪ್ರಯಾಣವನ್ನು ಒಟ್ಟಿಗೆ ಆಚರಿಸಲು ಇಂಡೋನೇಷ್ಯಾಕ್ಕೆ ತೆರಳಿದ್ದರು. ಅನೇಕ ಜೋಡಿಗಳಂತೆ, ಅವರು ಕೂಡ ಸುಂದರವಾದ ನೆನಪುಗಳನ್ನು ಸೆರೆಹಿಡಿಯಲು ಉತ್ಸುಕರಾಗಿದ್ದರು. ಸಮುದ್ರದಲ್ಲಿ ಮೋಟಾರ್ ಬೋಟ್‌ನಲ್ಲಿ ಫೋಟೋಶೂಟ್ ಮಾಡಲು ನಿರ್ಧರಿಸಿದರು. ದುರಂತವೆಂದರೆ ಚಿತ್ರೀಕರಣದ ವೇಳೆ ಇಬ್ಬರೂ ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಎರಡೂ ಕುಟುಂಬಗಳು ಆಘಾತಕ್ಕೆ ಒಳಗಾಗಿವೆ. ಮಕ್ಕಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ದಂಪತಿ ಮೃತದೇಹಗಳನ್ನು ಹುಟ್ಟೂರಾದ ಚೆನ್ನೈಗೆ ತರಲು ವ್ಯವಸ್ಥೆ ಮಾಡಲಾಗುತ್ತಿದೆ.(ಏಜೆನ್ಸೀಸ್​)
ಬೆಂಗಳೂರಲ್ಲಿ ಇಂದು & ನಾಳೆ ಪವರ್ ಕಟ್: ನಿಮ್ ಏರಿಯಾ ಕೂಡ ಇದೆಯಾ ಈಗಲೇ ಪರೀಕ್ಷಿಸಿ..

ಬಿಸಿಲ ಧಗೆಯಿಂದ ಬಸವಳಿದು ಕುಲ್ಫಿ ತಿಂದ 65 ಮಕ್ಕಳು ಅಸ್ವಸ್ಥ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 4 =
Remember me
