ಚೆನ್ನೈ:ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರು ಭಾನುವಾರ ಬೆಳಗ್ಗೆ 11 ಗಂಟೆಗೆ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಏಳು ಗಂಟೆಗಳ ಕಾಲ ಅಲ್ಲಿಯೇ ತಂಗಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಭದ್ರತಾ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ.
ಇದನ್ನೂ ಓದಿ:ಅಬ್ಬಬ್ಬಾ ಈ ಫ್ಯಾನ್ಸಿ ನಂಬರ್​ ಖರೀದಿಗೆ ಲಕ್ಷ ಲಕ್ಷ ಹಣ..! 4 ಕಾರ್​ ಬರ್ತಿದ್ವು ಎಂದ್ರು ನೆಟಿಜನ್ಸ್​!​
ನಾಲ್ವರು ಆರು ಗಂಟೆಗಳವರೆಗೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಗುಂಪಿನಲ್ಲಿ ಅಲೆದಾಡಿದರು. ಆ ನಂತರ ಸಂಜೆ ಆರು ಗಂಟೆಗೆ ಅಹಮದಾಬಾದ್‌ಗೆ ತೆರಳಲು ವಿಮಾನದಲ್ಲಿ ಹೊರಟಿದ್ದಾರೆ. ಈ ಮಾಹಿತಿ ಪಡೆದ ಗುಜರಾತ್ ಪೊಲೀಸರು ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ.
ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆಯ ಅಧಿಕಾರಿಗಳು ಮತ್ತು ಪೊಲೀಸರು ಜಾಗರೂಕತೆಯಿಂದ ಕಾರ್ಯನಿರ್ವಹಿಸಿದ್ದರೆ, ನಾಲ್ವರನ್ನು ಬಂಧಿಸಬಹುದಿತ್ತು. ಭಯೋತ್ಪಾದಕರು ವಿಮಾನ ನಿಲ್ದಾಣದಲ್ಲಿ ಏಳು ಗಂಟೆಗಳ ಕಾಲ ಕಳೆದರೂ ಭದ್ರತಾ ಪಡೆಗಳ ಗಮನಕ್ಕೆ ಬಂದಿಲ್ಲ ಎಂದು ಹೇಳಲಾಗಿದ್ದು, ಅಲ್ಲಿ ಭದ್ರತೆಯ ಲೋಪವಿದೆ. ಸದ್ಯ ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಿಫಲವಾಗಿರುವುದಕ್ಕೆ ಉನ್ನತ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ.
ಇದೇ ವೇಳೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಹೊಸ ಕೊರೊನಾ ವೈರಸ್ ಭೀತಿ..ಸರ್ಕಾರ ಹೇಳೋದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + fourteen =
Remember me
