-ಚುನಾವಣೆಗೆ 3 ದಿನಗಳ ಮೊದಲು ನಡೆಯಿತು ಈ ಘಟನೆ
ಛತ್ತೀಸ್‌ಗಢ:ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ (ನವೆಂಬರ್ 4) ಬಿಜೆಪಿ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆಯ ಹಿಂದೆ ಮಾವೋವಾದಿಗಳ ಕೈವಾಡ ಇದೆ ಎಂದು ಶಂಕೆ ವ್ಯಕ್ತವಾಗಿದೆ.
ಇದೇ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಈ ಘಟನೆ ನಡೆದಿದೆ. ಜರಘಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕೌಶಾಲನಗರ ಗ್ರಾಮದ ಮಾರುಕಟ್ಟೆಯಲ್ಲಿ ಸಂಜೆ 5:30ಕ್ಕೆ ದಾಳಿ ನಡೆದಿದೆ.
ರತನ್ ದುಬೆ (57) ಮೃತ. ನಾರಾಯಣಪುರದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾಗಿದ್ದ. ವಿಧಾನಸಭಾ ಚುನಾವಣಾ ಪ್ರಚಾರದ ಅಂಗವಾಗಿ ಕೋಸಲ್ನಾರ್ ಗ್ರಾಮಕ್ಕೆ ತೆರಳಿದ್ದರು ಈ ವೇಳೆ ಭಿಕರವಾಗಿಕೊಲೆ ಮಾಡಲಾಗಿದೆ.
ನಡೆದಿದ್ದೇನು?:ವಿಧಾನಸಭಾ ಚುನಾವಣಾ ಪ್ರಚಾರದ ಅಂಗವಾಗಿ ಕೋಸಲ್ನಾರ್ ಗ್ರಾಮಕ್ಕೆ ತೆರಳಿದ್ದರು.ಅಲ್ಲಿ ಪ್ರಚಾರ ಮುಗಿಸಿ ಕಾರಿನಲ್ಲಿ ಸಂಜೆ ಮನೆಗೆ ಮರಳುತ್ತಿದ್ದಾಗ ಗ್ರಾಮದಲ್ಲಿ ಅಡಗಿದ್ದ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕೆಳಗೆ ಬಿದ್ದಿದ್ದಾನೆ. ತಕ್ಷಣ ಮಾವೋವಾದಿಗಳು ಆತನನ್ನು ಹಿಡಿದು ಹರಿತವಾದ ಆಯುಧಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ನಾರಾಯಣಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಸಾಗರ್ ಸಿದರ್ ಮಾತನಾಡಿ, ಛತ್ತೀಸ್‌ಗಢ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಾವೋವಾದಿಗಳು ರಾಜಕೀಯ ಮುಖಂಡರ ಮೇಲೆ ದಾಳಿ ನಡೆಸುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಅಪರಿಚಿತ ವ್ಯಕ್ತಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಅವರ ಪತ್ತೆಗೆ ಭದ್ರತಾ ಪಡೆಗಳು ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿವೆ. ಚುನಾವಣಾ ಪ್ರಚಾರದ ವೇಳೆ ಸೂಕ್ತ ಭದ್ರತೆ ಒದಗಿಸಲಾಗಿತ್ತು, ಆದರೆ ದುಬೆಗೆ ಭೇಟಿ ನೀಡುವ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.
ಚುನಾವಣೆಗೂ ಮುನ್ನ ನಕ್ಸಲರು ಬಿಜೆಪಿ ನಾಯಕನನ್ನು ಕೊಂದಿದ್ದು, ಜನರು ಭಯಭೀತರಾಗಿದ್ದಾರೆ. ಈ ಹಿಂದೆಯೂ ಇಂತಹ ಕೊಲೆಗಳು ನಡೆದಿವೆ. ಇದಕ್ಕೂ ಕೆಲವು ದಿನಗಳ ಹಿಂದೆ ಮೊಹ್ಲಾ-ಮಾನ್‌ಪುರ-ಅಂಬಗಡ ಚೌಕಿ ಜಿಲ್ಲೆಯ ಔಂಧಿಯಲ್ಲಿ ನಕ್ಸಲೀಯರು ಬಿಜೆಪಿ ಮುಖಂಡ ಬಿರ್ಜುರಾಮ್ ಅವರನ್ನು ಗುಂಡಿಕ್ಕಿ ಕೊಂದಿದ್ದರು. ಶಸ್ತ್ರಸಜ್ಜಿತ ನಕ್ಸಲೀಯರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. 2009ರ ವಿಧಾನಸಭಾ ಚುನಾವಣೆಯ ನಂತರವೂ ನಕ್ಸಲೀಯರು ಬಿಜೆಪಿ ಅಭ್ಯರ್ಥಿ ದರ್ಬಾರ್ ಸಿಂಗ್ ಅವರನ್ನು ಇದೇ ರೀತಿಯಲ್ಲಿ ಕೊಂದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
