ಛತೀಸ್​​ಗಢ:ಕಳೆದ ತಿಂಗಳಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಹಲವು ಸ್ಥಳಗಳಲ್ಲಿ ಪ್ರವಾಹದ ಪರಿಸ್ಥಿತಿ ಮತ್ತು ಭೂಕುಸಿತ ಉಂಟಾಗಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಗೆ ತತ್ತರಿಸಿದ ಹಿಮಾಚಲ ಪ್ರದೇಶಕ್ಕೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಇಂದು 11 ಕೋಟಿ ರೂ. ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ:ಆತ ಕಪಾಳಮೋಕ್ಷ ಮಾಡಿದ, ಈತ ರೈಲು ಹಳಿ ಮೇಲೆ ಬಿದ್ದ: ಮುಂದೆ ನಡೆದಿದ್ದು ದುರಂತ..
ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್ ಅವರು ಗುರುವಾರ (ಆಗಸ್ಟ್​ 17) ಹಿಮಾಚಲ ಪ್ರದೇಶದ ಕೌಂಟರ್‌ಪರ್ ಸುಖ್ವಿಂದರ್ ಸಿಂಗ್ ಸುಖು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ತದನಂತರ ಜನರಿಗೆ ಸಹಾಯ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆಯೇ ಇಂದು (ಆಗಸ್ಟ್​ 18) ಹಿಮಾಚಲಕ್ಕೆ 11 ಕೋಟಿ ರೂ. ಹಣವನ್ನು ಘೋಷಣೆ ಮಾಡಿದ್ದಾರೆ.
ವಿಪತ್ತಿನ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿಗಾಗಿ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಛತ್ತೀಸ್‌ಗಢದ ಜನರ ಪರವಾಗಿ 11 ಕೋಟಿ ರೂ. ಆರ್ಥಿಕ ನೆರವನ್ನು ಬಿಡುಗಡೆಗೊಳಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ. ಭಾನುವಾರದಿಂದ ಹಿಮಾಚಲ ಪ್ರದೇಶದ ಗುಡ್ಡಗಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿಮ್ಲಾ ಮತ್ತು ಇತರ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ,(ಏಜೆನ್ಸೀಸ್).
‘ಜೈಲರ್’​ ನಂತರ ಕಮಲ್​ ಹಾಸನ್​ ಜತೆ ಸಿನಿಮಾ ಮಾಡಲು ನಿರ್ದೇಶಕ ನೆಲ್ಸನ್​ ಸಜ್ಜು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
