ರಾಯ್‌ಪುರ:ಛತ್ತೀಸ್‍ಗಢದ ರಾಜಧಾನಿ ರಾಯ್‌ಪುರದಲ್ಲಿ 22 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಪೇದೆಯೊಬ್ಬರನ್ನು ಬಂಧಿಸಿರುವುದಾಗಿ ಛತ್ತೀಸ್‌ಗಢ ಪೊಲೀಸರು ಶುಕ್ರವಾರ (ಸೆ.6 ರಂದು) ತಿಳಿಸಿದ್ದಾರೆ.
ಇದನ್ನೂ ಓದಿ:ವಿಶ್ವ ಕುಸ್ತಿ ಚಾಂಪಿಯನ್‌ಶಿಪ್​ನಲ್ಲಿ ಬೆಳ್ಳಿ, ಕಂಚಿನ ಪದಕ ಗೆದ್ದ ನಿಕಿತಾ, ನೇಹಾ!
ಪೊಲೀಸರ ಪ್ರಕಾರ, ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ 26 ವರ್ಷದ ಕಾನ್‌ಸ್ಟೆಬಲ್‌ನನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆಯ ದೂರಿನಲ್ಲಿ ಗುರುವಾರ ಮಧ್ಯರಾತ್ರಿ ತನ್ನ ಕಾರಿನಲ್ಲಿ ಮತ್ತು ತನ್ನ ನಿವಾಸದಲ್ಲಿ ಸೆಪ್ಟೆಂಬರ್ 4 ಮತ್ತು 5 ರ ರಾತ್ರಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಮಹಿಳೆ ಗುರುವಾರ ದೂರು ದಾಖಲಿಸಿದ್ದು, ಕಾನ್‌ಸ್ಟೆಬಲ್‌ನ ಬಂಧನಕ್ಕೆ ಕಾರಣವಾಗಿದೆ.
ಸಂತ್ರಸ್ತ ಯುವತಿ ತನ್ನ ಅಧ್ಯಯನಕ್ಕೆ ಸಂಬಂಧಿಸಿದಂತೆ ಸಹಾಯ ಕೇಳಿ ಪೊಲೀಸ್ ಪೇದೆ ಬಳಿ ಹೋಗಿದ್ದಾಳೆ. ಈ ವೇಳೆ ಆತ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರು 2-3 ತಿಂಗಳಿನಿಂದ ದೂರವಾಣಿಯಲ್ಲಿ ಸಂಪರ್ಕದಲ್ಲಿದ್ದರು. ಇಬ್ಬರು ಒಂದೇ ಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ.
22 ವರ್ಷದ ಯುವತಿ ಈ ಕುರಿತು ರಾಯ್‍ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರಿನ ಅಡಿ ಕಾನ್ಸ್‌ಟೇಬಲ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನಂತರ ಕೋರ್ಟ್ ಆರೊಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 64 ಮತ್ತು 351(2) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನೆ ದಾಳಿ ಭೀತಿಯಿಂದ ಒಟ್ಟಿಗೇ ಮಲಗಿದ್ದ ಮೂವರು ಮಕ್ಕಳನ್ನು ಕಚ್ಚಿ ಕೊಂದ ಹಾವು!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:eleven + four =
Remember me
