ಲಖನೌ:ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ನೂರಾರು ಜನರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕಣ್ಣೆದುರೇ ಜನರು ಸಾವನ್ನಪ್ಪುತ್ತಿರುವುದನ್ನು ನೋಡುತ್ತಿರುವ ವೈದ್ಯಕೀಯ ಸಿಬ್ಬಂದಿಯೂ ಮಾನಸಿಕವಾಗಿ ಕುಗ್ಗಲಾರಂಭಿಸಿದ್ದಾರೆ. ಅದೇ ರೀತಿ ಜಿಲ್ಲಾ ಮುಖ್ಯ ವೈದ್ಯಕೀಯ ಅಧೀಕ್ಷಕರೊಬ್ಬರು ಕೂ ಮುಗಿದು ಕಣ್ಣೀರಾಕಿರುವ ವಿಡಿಯೋ ವೈರಲ್​ ಆಗಿದೆ.
ಉತ್ತರ ಪ್ರದೇಶದ ಮಹಾರಾಜಗಂಜ್ ಜಿಲ್ಲೆಯ ಜಂಟಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಕಣ್ಣೀರು ಹಾಕಿರುವ ಅಧಿಕಾರಿ. ಆ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಅನೇಕರು ಆಕ್ಸಿಜನ್​ ಸಿಗದೆ ಒದ್ದಾಡುತ್ತಿದ್ದಾರೆ. ಕಣ್ಣೆದುರೇ ಜನರು ನರಳಾಡುತ್ತಿರುವುದನ್ನು ಕಂಡ ಅಧಿಕಾರಿ ನೋವಿನಿಂದ ಕಣ್ಣೀರಿಟ್ಟಿದ್ದಾರೆ. ಇದೆಂಥಾ ಪರಿಸ್ಥಿತಿ ಬಂದುಬಿಟ್ಟಿದೆ ಎಂದು ನೋವು ಹೊರಹಾಕಿದ್ದಾರೆ.
ಅಧಿಕಾರಿ ಕಣ್ಣೀರು ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಅಧಿಕಾರಿಯ ನೋವನ್ನು ನೋಡಿ ನೆಟ್ಟಿಗರೂ ಕಣ್ಣೀರಿಡಲಾರಂಭಿಸಿದ್ದಾರೆ. (ಏಜೆನ್ಸೀಸ್)
https://twitter.com/suryapsingh_IAS/status/1387970222599012353?s=20
ನೀಲಗಿರಿಗಿಲ್ಲ ಅರಣ್ಯ ಇಲಾಖೆ ಸಹಕಾರ! ಶಿವರಾಮ ಕಾರಂತರ ವಿರೋಧವೂ ಇತ್ತು…

ಆ್ಯಂಕರ್ ಅರುಣ ಬಡಿಗೇರ ತಂದೆ-ತಾಯಿಯನ್ನು ಬಲಿ ತೆಗೆದುಕೊಂಡ ಕರೊನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + eleven =
Remember me
