ಅಫ್ಘಾನಿಸ್ತಾನದ ಪೂರ್ವ ಪ್ರಾಂತ್ಯದ ನಂಗರ್‌ಹಾರ್ ಪ್ರಾಂತ್ಯದಲ್ಲಿ ದೋಣಿಯೊಂದು ಮಗುಚಿ ಬಿದ್ದು ಶನಿವಾರ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ದೋಣಿಯೊಂದು ನದಿಯಲ್ಲಿ ಮುಳುಗಿದ್ದು, 20 ಮಂದಿ ಮೃತಪಟ್ಟಿದ್ದಾರೆ.
ಇದನ್ನು ಓದಿ:https://www.vijayavani.net/home-remedies-for-dry-eye-syndrome
ಮೊಹಮಂಡ್​​ ದಾರಾ ಜಿಲ್ಲೆಯಲ್ಲಿ ನದಿ ದಾಟುತ್ತಿದ್ದಾಗ ದೋಣಿ ಪಲ್ಟಿಯಾಗಿದ್ದು, ದೋಣಿಯಲ್ಲಿದ್ದವರೆಲ್ಲರೂ ನೀರಿನಲ್ಲಿ ಮುಳುಗಿದ್ದಾರೆ ಎಂದು ನಂಗರ್‌ಹಾರ್ ಪ್ರಾಂತ್ಯದ ಮಾಹಿತಿ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಂತೀಯ ನಿರ್ದೇಶಕ ಖುರೇಷಿ ಬದ್ಲೋನ್ ಹೇಳಿದ್ದಾರೆ.
ಈ ಅವಘಡದಲ್ಲಿ ನೀರಿನಲ್ಲಿ ಮುಳುಗಿ 20 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ದೋಣಿಯಲ್ಲಿ 25 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಐವರು ಮಾತ್ರ ನೀರಿನಿಂದ ಈಜಿಕೊಂಡು ಬಂದು ಬದುಕುಳಿದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಬ್ಬ ಪುರುಷ, ಒಬ್ಬ ಮಹಿಳೆ, ಇಬ್ಬರು ಗಂಡು ಮತ್ತು ಹುಡುಗಿ ಸೇರಿದಂತೆ ಐದು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಂಗರ್‌ಹಾರ್‌ನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ, ಸ್ಥಳದಲ್ಲಿದ್ದ ರಕ್ಷಣಾ ಕಾರ್ಯಕರ್ತರು ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಅವಘಡ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ. (ಏಜೆನ್ಸೀಸ್​​)
ರೆಮಾಲ್​ ಚಂಡಮಾರುತದ ಎಫೆಕ್ಟ್​ : 4 ಮಂದಿ ಸಾವು, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 16 =
Remember me
