ಬೀಜಿಂಗ್​:ಕರೊನಾ ವೈರಾಣುವಿನ ಮೂಲವನ್ನು ಬೇಕಾದರೆ ಹುಡುಕಿಕೊಳ್ಳಿ. ಇದಕ್ಕೆ ನಮ್ಮ ಅಡ್ಡಿಯೇನೂ ಇಲ್ಲ ಎಂದು ಚೀನಾ ವಿಶ್ವ ಆರೋಗ್ಯ ಸಂಸ್ಥೆಗೆ ಹೇಳಿದೆ.
ಚೀನಾದ ವುಹಾನ್​ ಕರೊನಾ ವೈರಾಣುವಿನ ಉಗಮ ಸ್ಥಾನ. ಕಳೆದ ವರ್ಷದ ನವೆಂಬರ್​ನಿಂದ ಇಲ್ಲಿಂದಲೇ ಕೋವಿಡ್​-19 ಸೋಂಕು ವಿಶ್ವವ್ಯಾಪಿಯಾಯಿತು ಎಂಬ ಅನುಮಾನವನ್ನು ಪರಿಹರಿಸಿಕೊಳ್ಳಲು ವಿಶ್ವ ಆರೋಗ್ಯ ಸಂಸ್ಥೆಯ ನಿಯೋಗವೊಂದು ಚೀನಾಕ್ಕೆ ಭೇಟಿ ನೀಡಲು ಉದ್ದೇಶಿಸಿದೆ. ತನಿಖೆಗಾಗಿ ಆಗಮಿಸುವ ಈ ನಿಯೋಗಕ್ಕೆ ಮುಕ್ತಪ್ರವೇಶ ನೀಡುವುದಾಗಿ ಚೀನಾ ಬುಧವಾರ ಹೇಳಿದೆ.
ಇದನ್ನೂ ಓದಿ:ಇಂಜಿನಿಯರಿಂಗ್​ ಮತ್ತು ವೈದ್ಯಕೀಯ ಶಿಕ್ಷಣ ನವೆಂಬರ್​-ಡಿಸೆಂಬರ್​ನಲ್ಲಿ ಆರಂಭ?
ಇದೇ ವೇಳೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಹೋಗುವ ಅಮೆರಿಕದ ನಿರ್ಧಾರವನ್ನು ಚೀನಾ ಟೀಕಿಸಿದೆ. ಅಮೆರಿಕದ ಈ ನಿರ್ಧಾರ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಬಹುದೊಡ್ಡ ತೊಡಕಾಗಿ ಪರಿಣಮಿಸಲಿದೆ. ಅಷ್ಟೇ ಅಲ್ಲ, ಸಾಂಕ್ರಾಮಿಕ ರೋಗಗಳ ತಡೆಗೆ ಜಾಗತಿಕ ಪ್ರಯತ್ನಗಳನ್ನು ಅಪಮೌಲ್ಯಗೊಳಿಸಿದಂತಾಗುತ್ತದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್​ ಹೇಳಿದ್ದಾರೆ.
ಜಾಗತಿಕ ಸಾರ್ವಜನಿಕ ಆರೋಗ್ಯ ಭದ್ರತೆ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಹೆಚ್ಚು ಅಧಿಕಾರಯುತವಾದ ಮತ್ತು ವೃತ್ತಿಪರವಾದ ಅಂತಾರಾಷ್ಟ್ರೀಯ ಸಂಸ್ಥೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜುಲೈ 10ರಿಂದ 16ವರೆಗೆ ಪಟನಾ ಲಾಕ್​ಡೌನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
