ನವದೆಹಲಿ:ಗಡಿ ವಿವಾದ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಚೀನಾದ ಜತೆ ಮಾತುಕತೆ ಜಾರಿಯಲ್ಲಿದೆ. ಆದರೆ ವಿವಾದ ಎಷ್ಟರಮಟ್ಟಿಗೆ ಪರಿಹಾರವಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ನಮ್ಮಿಂದ ಒಂದಿಂಚು ಭೂಮಿಯನ್ನೂ ಅವರಿಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಶುಕ್ರವಾರ ಲೇಹ್​ಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದು, ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ನಿಯೋಜನೆಗಳು ಕುರಿತು ಸಮಗ್ರ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಅನವಶ್ಯಕವಾಗಿ ಸಂಚರಿಸಿದರೆ ಕೇಸ್, ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ, ವಿವಿಧೆಡೆ ಲಾಕ್‌ಡೌನ್ ನಿಯಮ ಪರಿಶೀಲನೆ
ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​ ಮತ್ತು ಸೇನಾಪಡೆ ಮುಖ್ಯಸ್ಥ ಜನರಲ್​ ಎಂ.ಎಂ. ನರವಾನೆ ರಕ್ಷಣಾ ಸಚಿವರಿಗೆ ಸಾಥ್​ ನೀಡುತ್ತಿದ್ದಾರೆ. ಇವರೆಲ್ಲರೂ ಲುಕುಂಗ್​ ಮತ್ತು ಸ್ಟಕ್ನಾದಲ್ಲಿರುವ ಮುಂಚೂಣಿ ನೆಲೆಗಳಿಗೆ ಭೇಟಿ ನೀಡಲಿದ್ದಾರೆ.
ಮಾತುಕತೆ ಮೂಲಕವೇ ಗಡಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾದರೆ, ಅದಕ್ಕಿಂತ ಸಂತೋಷದ ಕ್ಷಣ ಮತ್ತೊಂದಿಲ್ಲ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಜು.3ರಂದು ಲಡಾಖ್​ಗೆ ಅಚ್ಚರಿಯ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಮುಂಚೂಣಿ ನೆಲೆಗಳಲ್ಲಿ ನಿಯೋಜನೆಗೊಂಡಿರುವ ಯೋಧರನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲದೆ, ಭಾರತ-ಚೀನಾ ಗಡಿ ವಿವಾದವನ್ನು ಇತ್ಯರ್ಥ ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇದೀಗ ಲಡಾಖ್​ಗೆ ಭೇಟಿ ನೀಡುತ್ತಿದ್ದಾರೆ.
ಈ ಉದ್ಯಮಿಯ ಮಾಸ್ಕ್‌ ಬೆಲೆ ಮೂರೂವರೆ ಲಕ್ಷ ರೂ.!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 16 =
Remember me
