ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್​ ಲೇಹ್​ ಭೇಟಿಗೆ ಚೀನಾ ಭಾರಿ ಆಕ್ಷೇಪ ವ್ಯಕ್ತಪಡಿಸಿದೆ. ಲಡಾಖ್​ನಲ್ಲಿ ಪರಿಸ್ಥಿತಿ ತುಂಬಾ ಉದ್ವಿಗ್ನವಾಗಿದೆ. ಪ್ರಧಾನಿ ಮೋದಿ ಅವರ ಭೇಟಿಯಂಥ ಕ್ರಮಗಳು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುತ್ತವೆ. ಆದ್ದರಿಂದ, ಇಂಥ ಕ್ರಮಗಳನ್ನು ಸಾಧ್ಯವಾದಷ್ಟು ತೆಗೆದುಕೊಳ್ಳದಿರಿ ಎಂದು ಪುಕ್ಕಟ್ಟೆ ಸಲಹೆಯನ್ನೂ ಕೊಟ್ಟಿದೆ.
ಟ್ವಿಟ್ಟರ್​ ಸಂದೇಶದಲ್ಲಿ ಪ್ರಧಾನಿ ಮೋದಿ ಭೇಟಿಗೆ ಆಕ್ಷೇಪ ವ್ಯಕ್ತಪಡಿಸಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಹೊ ಲಿಜಿಯನ್​, ಲಡಾಖ್​ನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಣಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಮಿಲಿಟರಿ ಹಾಗೂ ರಾಜತಾಂತ್ರಿಕ ಮಾತುಕತೆ ನಡೆಸುತ್ತಿವೆ. ಇಂಥ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುವ ರೀತಿಯಲ್ಲಿ ಅಥವಾ ಪ್ರಚೋದಿಸುವ ರೀತಿಯ ವರ್ತನೆಗಳು ಸಲ್ಲದು ಎಂದು ಹೇಳಿದ್ದಾರೆ.
India & China are in communication and negotiations on lowering the temperatures through military & diplomatic channels. No party should engage in any action that may escalate the situation at this point:Zhao Lijian, Chinese Foreign Ministry spokesperson on PM Modi's Ladakh visitpic.twitter.com/ZYGjGGIdt9
— ANI (@ANI)July 3, 2020

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರದಿಂದ ಸೇನಾಪಡೆ ಮುಖ್ಯಸ್ಥ ಜನರಲ್​ ಎಂ.ಎಂ. ನರವಾನೆ ಮತ್ತು ಸಿಡಿಎಸ್​ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​ ಅವರ ಜತೆಗೂಡಿ ಲೇಹ್​ನ ಮುಂಚೂಣಿ ಸೇನಾನೆಲೆ ನೀಮುಗೆ ಭೇಟಿ ಕೊಟ್ಟು, ಅಲ್ಲಿ ನಿಯೋಜನೆಗೊಂಡಿರುವ ಭಾರತೀಯ ವಾಯುಪಡೆ, ಸೇನಾಪಡೆ ಮತ್ತು ಐಟಿಬಿಪಿ ಯೋಧರ ಜತೆ ಮಾತುಕತೆ ನಡೆಸಿದರು. ಇದು ಚೀನಾದ ಕೆಂಗಣ್ಣಿಗೆ ಕಾರಣವಾಗಿದೆ.
ಆಗಸ್ಟ್​ 15ಕ್ಕೆ ಕೋವಿಡ್​-19 ಮಹಾಮಾರಿಯಿಂದ ಬಿಡುಗಡೆ ನಿಶ್ಚಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + eight =
Remember me
