ನವದೆಹಲಿ:ಈಶಾನ್ಯ ಲಡಾಖ್​ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಮತ್ತು ಚೀನಾ ನಡುವಿನ ಸಂಘರ್ಷದ ನಂತರ, ಭಾರತದ ಸೇನೆಯ ಇಬ್ಬರು ಮೇಜರ್ ಸೇರಿದಂತೆ ಹತ್ತು ಮಂದಿ ಯೋಧರನ್ನು ಚೀನಾ ಬಿಡುಗಡೆಗೊಳಿಸಿದೆ ಎಂದು ವರದಿಯಾಗಿದೆ. ಘರ್ಷಣೆಯ ನಂತರ ಎರಡೂ ದೇಶಗಳ ನಡುವೆ ಮಾತುಕತೆ ನಡೆದ ನಂತರ ನಿನ್ನೆ ರಾತ್ರಿಯ ವೇಳೆ ಈ ಬೆಳವಣಿಗೆ ಕಂಡಿರುವುದಾಗಿ ಹೇಳಲಾಗಿದೆ.
ಸಂಘರ್ಷದ ವೇಳೆ ಯಾವುದೇ ಭಾರತೀಯ ಯೋಧರು ನಾಪತ್ತೆಯಾಗಿಲ್ಲ ಎಂದು ಸೇನೆ ನಿನ್ನೆ ಹೇಳಿಕೆ ನೀಡಿತ್ತು. ಆದರೆ ಈ ಬಗ್ಗೆ ಹೆಚ್ಚಿನ ವಿವರಗಳನ್ನು ಸೇನೆ ನೀಡಿರಲಿಲ್ಲ. ಈ ನಡುವೆಯೇ ಯೋಧರ ಬಿಡುಗಡೆಯ ಕುರಿತು ವರದಿಯಾಗಿದೆ. ಆದರೆ ಅಧಿಕಾರಿಗಳ ಅಧಿಕೃತ ಹೇಳಿಕೆ ಇನ್ನೂ ಹೊರಬಂದಿಲ್ಲ.
ಇದನ್ನೂ ಓದಿ:ಚೀನಾ ಜಾಹೀರಾತು ಬಿಡಿ, ಯೋಧರನ್ನು ಗೌರವಿಸಿ: ಅಭಿಯಾನಕ್ಕೆ ತಾರೆಯರಿಗೆ ಆಹ್ವಾನ
ಈಗ ಬಂದಿರುವ ವರದಿಗಳ ಅನ್ವಯ, ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯ ಮೇಜರ್ ಜನರಲ್ ಶ್ರೇಣಿಯ ಅಧಿಕಾರಿಗಳ ಮಾತುಕತೆಯ ನಂತರ ಇಂಥದ್ದೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮತ್ತೊಂದು ವರದಿಯ ಪ್ರಕಾರ, ಸೋಮವಾರ ನಡೆದ ಘರ್ಷಣೆಯಲ್ಲಿ 76 ಭಾರತೀಯ ಸೈನಿಕರು ಗಾಯಗೊಂಡಿದ್ದರು. ಅದರಲ್ಲಿ 18 ಮಂದಿಗೆ ಗಂಭೀರ ಗಾಯಗಳಾಗಿದ್ದು, 58 ಯೋಧರಿಗೆ ಅಲ್ಪ ಗಾಯಗಳಾಗಿವೆ. 18 ಯೋಧರು ಲೇಹ್​ನಲ್ಲಿರುವ ಆಸ್ಪತ್ರೆಯಲ್ಲಿ ಹಾಗೂ ಉಳಿದವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
1967ರ ನಾಥು ಲಾ ಪಾಸ್ ಸಂಘರ್ಷದ ಬಳಿಕ ಭಾರತ ಮತ್ತು ಚೀನಾ ದೇಶಗಳ ನಡುವೆ ನಡೆದ ಅತ್ಯಂದ ದೊಡ್ಡ ಮಟ್ಟದ ಸಂಘರ್ಷ ಇದು ಎನ್ನಲಾಗಿದೆ. 1967ರ ಸಂಘರ್ಷದಲ್ಲಿ ಭಾರತೀಯ ಸೇನೆ 8 ಸೈನಿಕರನ್ನು ಹಾಗೂ ಚೀನಾ 300ಕ್ಕೂ ಹೆಚ್ಚು ಸೈನಿಕರು ಕಳೆದುಕೊಂಡಿದ್ದವು.(ಏಜೆನ್ಸೀಸ್​)
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸ್ಥಾನ ಗಳಿಸಿದ ಭಾರತ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 − 2 =
Remember me
