ಪಟನಾ:ಲೋಕ ಜನಶಕ್ತಿ ಪಕ್ಷ (ಎಲ್​ಜೆಪಿ)ದ ಅಧ್ಯಕ್ಷ ಸ್ಥಾನದಲ್ಲಿದ್ದ ಚಿರಾಗ್​ ಪಾಸ್ವಾನ್​ ಅವರನ್ನು ಅವರದ್ದೇ ಪಕ್ಷದ ಬಂಡಾಯ ಸಂಸದರು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದಾರೆ. ಒನ್ ಮ್ಯಾನ್ ಒನ್​ ಪೋಸ್ಟ್ ಇರಬೇಕೆಂಬ ಪ್ರಿನ್ಸಿಪಲ್​ ಆಧಾರದಲ್ಲಿ ಈ ರೀತಿಯ ತೀರ್ಮಾನ ತೆಗೆದುಕೊಂಡಿರುವುದಾಗಿ ಸಂಸದರು ಹೇಳಿದ್ದಾರೆ.
ಸದ್ಯ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದ್ದು, ಸದ್ಯದಲ್ಲೇ ಎಲ್​ಜೆಪಿ ಸಂಸದೀಯ ಮಂಡಳಿಯ ನಾಯಕ ಸ್ಥಾನದಿಂದಲೂ ತೆಗೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಸದ್ಯದಲ್ಲೇ ಪಕ್ಷದ ರಾಷ್ಟ್ರೀಯ ಕಾಮಕಾರಿ ಸಭೆ ನಡೆಯಲಿದ್ದು, ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಅಲ್ಲಿಯವರೆಗೆ ಸೂರಜ್​ ಭನ್​ ಅವರನ್ನು ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸುವುದಾಗಿ ಹೇಳಲಾಗಿದೆ.
ಎಲ್​ಜೆಪಿಯಲ್ಲಿ ಸೋಮವಾರ ಇದ್ದಕ್ಕಿದ್ದಂತೆ ದಿಢೀರ್​ ಬೆಳವಣಿಗೆಯಾಗಿದ್ದು, ಐವರು ಸಂಸದರು ಬಂಡೆದ್ದಿದ್ದಾರೆ. ಚಿರಾಗ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಾಸ್ ಅವರನ್ನು ಸಂಸದೀಯ ಪಕ್ಷದ ನೂತನ ನಾಯಕ ಎಂದು ಘೋಷಿಸಿಬಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿರಾಗ್, “ನನ್ನ ತಂದೆ ಕಟ್ಟಿದ ಪಕ್ಷವನ್ನು ಒಟ್ಟಿಗೆ ಇಟ್ಟುಕೊಳ್ಳಲು ಪ್ರಯತ್ನಿಸಿದೆವು ಆದರೆ ಅದು ವಿಫಲವಾಗಿದೆ.” ಎಂದು ಟ್ವೀಟ್​ ಮೂಲಕ ಹೇಳಿದ್ದಾರೆ. (ಏಜೆನ್ಸೀಸ್)
17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಗಂಡನನ್ನು ಕೊಂದು ಆತನ ಮರ್ಮಾಂಗ ಫ್ರೈ ಮಾಡಿದ ಹೆಂಡತಿ! ಮಹಿಳೆಯ ಹುಚ್ಚಾಟ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
