ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​​​ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ನೀಲಗಿರಿಯ ಕೊನೂರು​​ ಬಳಿ ಪತನಗೊಂಡಿದ್ದು, ಈ ವೇಳೆ ಸೇನಾ ಮುಖ್ಯಸ್ಥ ರಾವತ್​, ಅವರ ಪತ್ನಿ ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡು ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್​​​ ವರುಣ್​​​ ಸಿಂಗ್​​ ಅವರಿಗೆ ವೆಲ್ಲಿಂಗ್ಟನ್​ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಶೌರ್ಯಚಕ್ರ ಪುರಸ್ಕೃತ ಕ್ಯಾಪ್ಟನ್​​ ವರುಣ್​​​ ಸಿಂಗ್​​​​, 2020ರಲ್ಲಿ ತೇಜಸ್​​​ ಯುದ್ಧ ವಿಮಾನ ರಕ್ಷಣೆ ಮಾಡಿದ್ದಕ್ಕಾಗಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Gp Capt Varun Singh SC, Directing Staff at DSSC with injuries is currently under treatment at Military Hospital, Wellington.— Indian Air Force (@IAF_MCC)December 8, 2021
Gp Capt Varun Singh SC, Directing Staff at DSSC with injuries is currently under treatment at Military Hospital, Wellington.
ತಮಿಳುನಾಡಿನ ನೀಲಗಿರಿ ಕೊನೂರು​​​ ಸಮೀಪ ಹೆಲಿಕಾಪ್ಟರ್ ಪತನಗೊಂಡಿತ್ತು. ಇದರಲ್ಲಿ ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ ನಾಯಕ್​ ವಿವೇಕ್ ಕುಮಾರ್​, ಲ್ಯಾನ್ಸ್ ನಾಯಕ್​ ಬಿ ಸಾಯ್​ತೇಜ್​, ಹವಲ್ದಾರ್​ ಸತ್ಪಾಲ್​ ರಷ್ಯಾ ನಿರ್ಮಿತ Mi-17V5 ಹೆಲಿಕಾಪ್ಟರ್​​ನಲ್ಲಿ ಪ್ರಯಾಣ ಮಾಡುತ್ತಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
