ಹೈದರಾಬಾದ್:ಸಿಐಡಿ ಅಧಿಕಾರಿಯ ವಿರುದ್ಧವೇ ಪ್ರಕರಣ ದಾಖಲಾಗಿರುವ ಘಟನೆ ತೆಲಂಗಾಣದ ಹೈದರಾಬಾದ್​ನಲ್ಲಿ ನಡೆದಿದೆ.
ಇದನ್ನೂ ಓದಿ:VIDEO| ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಮೋಜು-ಮಸ್ತಿ: ಭಾರೀ ದಂಡ ವಿಧಿಸಿದ ಪೊಲೀಸ್​​
ಎರಡು ವರ್ಷಗಳ ಹಿಂದೆ ಸರೂರ್ ನಗರ ಸ್ಟೇಡಿಯಂನಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದ ವೇಳೆ ಮೊದಲ ಬಾರಿಗೆ ಭೇಟಿಯಾದಾಗಿನಿಂದ ಅಧಿಕಾರಿ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸದರ್ನ್ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್ (ಟಿಎಸ್‌ಎಸ್‌ಪಿಡಿಸಿಎಲ್) ಮಹಿಳಾ ಉದ್ಯೋಗಿಯೊಬ್ಬರು ಹೇಳಿದ್ದಾರೆ. ಆರೋಪಿಯು ತನಗೆ ಅಶ್ಲೀಲ ಸಂದೇಶಗಳು, ಫೋಟೋಗಳು ಮತ್ತು ವೀಡಿಯೊಗಳನ್ನು ವ್ಯಾಟ್ಸ್​​ಆ್ಯಪ್​​ನಲ್ಲಿ ಕಳುಹಿಸುತ್ತಿದ್ದರು. ಸೀರೆಯಲ್ಲಿ ತನ್ನ ಛಾಯಾಚಿತ್ರವನ್ನು ಕಳುಹಿಸುವಂತೆಯೂ ಅಧಿಕಾರಿ ಹೇಳಿದ್ದ ಎಂದು ಆರೋಪಿಸಿದ್ದಾಳೆ.
ಅಲ್ಲದೇ ತಾನು ನಡೆಸುವ ನಡೆಸುವ ವಿಶೇಷ ತರಗತಿಗೆ ಹಾಜರಾಗುವಂತೆ ಅಧಿಕಾರಿ ಹೇಳಿದ್ದಾರೆ. ಜತೆಗೆ ಪ್ರಕರಣವೊಂದರ ಕುರಿತು ಚರ್ಚಿಸಲು ತನ್ನನ್ನು ಖುದ್ದಾಗಿ ಭೇಟಿಯಾಗುವಂತೆ ಹೇಳಿದ್ದಾನೆ ಎಂದು ಮಹಿಳೆಯು ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರೇಟರ್ ಹೈದರಾಬಾದ್‌ನ ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಚೈತನ್ಯಪುರಿ ಪೊಲೀಸ್ ಠಾಣೆಯಲ್ಲಿ ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 17 =
Remember me
