ನವದೆಹಲಿ:ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಾಲಿವುಡ್​ ಚೆಲುವೆ, ನಟಿ ಕಂಗನಾ ರಣಾವತ್​, ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆಯಲ್ಲೇ ಗೆದ್ದು, ನೂತನ ಸಂಸದೆಯಾಗಿ ಆಯ್ಕೆಯಾಗಿರುವುದು ಇದೀಗ ವಿರೋಧ ಪಕ್ಷಗಳ ನಾಯಕರ ಹುಬ್ಬೇರಿಸಿದೆ. ಗೆಲುವು ಸಾಧಿಸಿದ ಖುಷಿಯಲ್ಲಿದ್ದ ನಟಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್​ಎಫ್​(CISF) ಮಹಿಳಾ ಪೇದೆಯೊಬ್ಬರು ಕಪಾಳ ಮೋಕ್ಷ ಮಾಡಿದ ಘಟನೆ ಅತೀವ ನೋವನ್ನು ತಂದೊಡ್ಡಿದೆ.
ಇದನ್ನೂ ಓದಿ:ಕಾಂಗ್ರೆಸ್ ತಂತ್ರಕ್ಕೆ ಮನ್ನಣೆ ನೀಡದ ಮತದಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲೇ ಕೈ ಬಿಟ್ಟ ಜನತೆ
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ಕಂಗನಾ ರಣಾವತ್​ ಮೇಲೆ ಹಲ್ಲೆ ನಡೆಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್‌ ಅವರನ್ನು ತಕ್ಷಣವೇ ಕರ್ತವ್ಯದಿಂದ ಅಮಾನತುಗೊಳಿಸಿ, ಚಂಡೀಗಢ ಏರ್​ಪೋರ್ಟ್​​ನಲ್ಲಿ ಬಂಧಿಸಲಾಯಿತು. ನೂತನ ಸಂಸದೆ ಮೇಲೆ ಅನುಚಿತ ವರ್ತನೆ ಆರೋಪದ ಮೇಲೆ ಮಹಿಳಾ ಸಿಐಎಸ್‌ಎಫ್ ಪೇದೆಯ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ.
https://x.com/Kul_winderKaur/status/1798936612589748254
ಇನ್ನು ಕರ್ತವ್ಯದಿಂದ ಅಮಾನತುಗೊಂಡ ಕುಲ್ವಿಂದರ್ ಕೌರ್‌, ತಮ್ಮ ಅಧಿಕೃತ ಎಕ್ಸ್​ (ಈ ಹಿಂದಿನ ಟ್ವಿಟರ್​) ಖಾತೆಯಲ್ಲಿ, “ಈ ಕೆಲಸ ಕಳೆದುಕೊಳ್ಳುವ ಭಯ ನನಗಿಲ್ಲ. ನನ್ನ ತಾಯಿಯ ಗೌರವಕ್ಕಾಗಿ ಇಂತಹ ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ನಾನು ಸಿದ್ಧ” ಎಂದು ಬರೆದು, ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).
ಚಂದನ್ ಶೆಟ್ಟಿ ಮತ್ತು ನಾನು… ವಿಚ್ಛೇದನದ ಬಗ್ಗೆ ಕಡೆಗೂ ಮೌನ ಮುರಿದ ನಿವೇದಿತಾ ಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
