ಪಟನಾ: ಪೌರತ್ವ ತಿದ್ದುಪಡಿ ಕಾನೂನನ್ನು (ಸಿಎಎ) ಮರುಪರಿಶೀಲನೆಗೆ ಒಳಪಡಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಆಗ್ರಹಿಸಿದ್ದಾರೆ. ರಾಷ್ಟ್ರವ್ಯಾಪಿ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಗತ್ಯವೂ ಇಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಸಿಎಎ ಬಗ್ಗೆ ಅಪಸ್ವರ ಎತ್ತಿದ ಬಿಜೆಪಿ ನೇತೃತ್ವದ ಮೈತ್ರಿಕೂಟದ ಮೊದಲ ನಾಯಕನಾಗಿ ನಿತೀಶ್ ಹೊರಹೊಮ್ಮಿದ್ದಾರೆ. ಸಿಎಎ ಬಗ್ಗೆ ರ್ಚಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ನಡೆಸುವ ಅಗತ್ಯವಿದೆ. ಎನ್​ಆರ್​ಸಿಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ. ಅದರ ಅಗತ್ಯವೂ ಇಲ್ಲ ಎಂದಿದ್ದಾರೆ.
ಅಂದು ಬೆಂಬಲ; ಇಂದು ವಿರೋಧ: ರಾಷ್ಟ್ರೀಯ ಪೌರತ್ವ ಮಸೂದೆಗೆ ನಿತೀಶ್ ನಾಯಕತ್ವದ ಜೆಡಿಯು ಸಂಸತ್ತಿನಲ್ಲಿ ಬೆಂಬಲ ನೀಡಿತ್ತು. ಈಗ ನಿತೀಶ್ ತಮ್ಮ ನಿಲುವನ್ನು ಬದಲಾಯಿಸಿ ಸಿಎಎ ವಿರುದ್ಧ ತಿರುಗಿ ಬಿದ್ದಿದ್ದಾರೆ. ಕಾಂಗ್ರೆಸ್ ಮತ್ತು ಲಾಲು ಪ್ರಸಾದ್ ಯಾದವ್​ರ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಸದಸ್ಯರು, ಸಿಎಎ ವಿರುದ್ಧ ಸದನದಲ್ಲಿ ತೀಕ್ಷ್ಣ ವಾಗ್ದಾಳಿ ನಡೆಸಿದ ನಂತರ ಮುಖ್ಯಮಂತ್ರಿ ನಿತೀಶ್​ಕೂಡ ಇದಕ್ಕೆ ದನಿಗೂಡಿಸಿದರು. ಸಿಎಎ ಬಗ್ಗೆ ರ್ಚಚಿಸುವ ಅಗತ್ಯವಿದೆ. ಎಲ್ಲ ಸದಸ್ಯರು ಬಯಸಿದರೆ ಈ ಸದನದಲ್ಲಿ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಎನ್​ಆರ್​ಸಿಗೆ ಯಾವುದೇ ಸಮರ್ಥನೆ ಇಲ್ಲ ಎಂದರು. ‘ಸಿಎಎ, ಎನ್​ಆರ್​ಸಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವುದಿಲ್ಲ’ ಎಂದು ಜೆಡಿಯು ನಾಯಕ ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ ಮರುದಿನವೇ ನಿತೀಶ್ ತಮ್ಮ ನಿಲುವನ್ನು ಬಹಿರಂಗಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + six =
Remember me
