ಔರಂಗಾಬಾದ್​​:ಭಾರತದಲ್ಲಿ ನ್ಯಾಯಾಂಗಕ್ಕೆ ಮೂಲಸೌಕರ್ಯ ಒದಗಿಸುವಲ್ಲಿ ಸರ್ಕಾರಗಳು ಸಾಕಷ್ಟು ಆಸಕ್ತಿ ತೋರುತ್ತಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್​.ವಿ.ರಮಣ ಹೇಳಿದ್ದಾರೆ. ಕೇಂದ್ರ ಕಾನೂನು ಸಚಿವ ಕಿರೆಣ್​ ರಿಜಿಜು ಅವರ ಮುಂದೆಯೇ ಸಿಜೆಐ ಈ ಕಳಕಳಿ ವ್ಯಕ್ತಪಡಿಸಿದ್ದಾರೆ.
ಇಂದು(ಅ.23) ಬಾಂಬೆ ಹೈಕೋರ್ಟ್​ನ ಔರಂಗಾಬಾದ್​ ಪೀಠದ ಅನೆಕ್ಸ್​ ಕಟ್ಟಡದ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಸಿಜೆಐ ಅವರು, ನ್ಯಾಯಾಂಗಕ್ಕೆ ಉತ್ತಮ ಮೂಲಸೌಕರ್ಯ ಲಭ್ಯವಿಲ್ಲದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. “ಭಾರತದಲ್ಲಿ ನ್ಯಾಯಾಂಗಕ್ಕೆ ಮೂಲಸೌಕರ್ಯ ಒದಗಿಸುವುದು ಯಾವಾಗಲೂ ನಂತರದ ಚಿಂತನೆಯಾಗಿಬಿಟ್ಟಿದೆ. ಈ ಮನಸ್ಥಿತಿಯ ಕಾರಣದಿಂದಾಗಿ ಭಾರತದಲ್ಲಿ ನ್ಯಾಯಾಲಯಗಳು ಇನ್ನೂ ಶಿಥಿಲಗೊಂಡ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವ ಕಷ್ಟ ಎದುರಿಸುತ್ತಿವೆ” ಎಂದು ಹೇಳಿದರು.
ದೇಶದ ಶೇಕಡ 26 ರಷ್ಟು ನ್ಯಾಯಾಲಯಗಳಲ್ಲಿ ಮಹಿಳೆಯರಿಗಾಗಿ ಶೌಚಾಲಯಗಳಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ, “ರಾಷ್ಟ್ರೀಯ ನ್ಯಾಯಾಂಗ ಮೂಲಸೌಕರ್ಯ ಪ್ರಾಧಿಕಾರದ ಸ್ಥಾಪನೆಗೆ ನಾನು ಪ್ರಸ್ತಾವನೆ ಕಳುಹಿಸಿದ್ದೇನೆ. ಅದನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ತರುವಂತೆ ಕಾನೂನು ಮತ್ತು ನ್ಯಾಯಾಂಗ ಸಚಿವರನ್ನು ಆಗ್ರಹಿಸುತ್ತೇನೆ” ಎಂದರು.(ಏಜೆನ್ಸೀಸ್)
Lakhimpur Kheri Case: ಇನ್ನೂ ಮೂವರ ಬಂಧನ

ವಿಮಾನ ನಿಲ್ದಾಣ ಅಧಿಕಾರಿಗಳ ಬಗ್ಗೆ ದೂರಿದ್ದ ನಟಿ ಸುಧಾ ಚಂದ್ರನ್​ ಕ್ಷಮೆ ಕೋರಿದ ಸಿಐಎಸ್​ಎಫ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
