ಕೋಲ್ಕತ : ಶಾಲಾ ಆವರಣದಲ್ಲಿ ಬಾಂಬ್​ ಸ್ಫೋಟಗೊಂಡು ಎರಡನೇ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದು ಹಲವು ವಿಧ್ಯಾರ್ಥಿಗಳು ಗಾಯಗೊಂಡಿರುವ ದುರಂತ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವರದಿಯಾಗಿದೆ.
ಮೃತ ವಿದ್ಯಾರ್ಥಿಯನ್ನು ಮುಕ್ಲೇಸೂರ್​ ರೆಹಮಾನ್ (7)​ ಎಂದು ಗುರುತಿಸಲಾಗಿದೆ. ಈ ಘಟನೆ ಮುರ್ಷಿದಾಬಾದ್​ ಜಿಲ್ಲೆಯ ದೌಲತಾಬಾದ್ ಪೊಲೀಸ್​ ಠಾಣೆ ವ್ಯಾಪ್ತಿಯ ಚೋಯಾದಂಗದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ಎಂದಿನಂತೆ ದೌಲತಾಬಾದ್​ನ ಚೋಯಾದಂಗ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಾಂಗಕ್ಕೆ ತೆರಳಿದ್ದ, ಮಧ್ಯಾಹ್ನ ಊಟ ಮುಗಿಸಿ ಮಕ್ಕಳೊಂದಿಗೆ ಶಾಲೆಯ ಮೈದಾನದಲ್ಲಿ ಆಟ ಆಡಲು ತೆರಳಿದ್ದ. ಮೈದಾನದಲ್ಲಿ ಬಾಲ್​ ಕಣ್ಣಿಗೆ ಬಿದ್ದಿದೆ ಅದನ್ನು ತೆಗೆದುಕೊಂಡು ಗೋಡೆಗೆ ಎಸೆದಿದ್ದೇ ತಡ ಬಾಂಬ್​ ಸ್ಫೋಟವಾಗಿದೆ. ಇದರಿಂದ ಮುಕ್ಲೇಸೂರ್​ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್​ ಸ್ಫೋಟದ ಶಬ್ಧಕ್ಕೆ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಆಗಮಿಸಿದ್ದಾರೆ. ಸ್ಥಳದಲ್ಲೇ ಅಸುನೂಗಿದ್ದ ಮುಕ್ಲೇಸೂರು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ದೌಲತಾಬಾದ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮುಗ್ಧ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಬಾಂಬ್​ ಸ್ಫೋಟ​ ಆಗಿರುವುದಕ್ಕೆ ತೀವ್ರ ನೋವು ವ್ಯಕ್ತಪಡಿಸಿದ ಸ್ಥಳೀಯರು, ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಮೃತ ಶವವನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ವರಿದಿಯಾಗಿದೆ.(ಏಜೆನ್ಸೀಸ್​)
ನೀವು ದೇಹದ ಈ 5 ಭಾಗಗಳನ್ನು ಯಾವತ್ತೂ ಸ್ವಚ್ಛವಾಗಿ ತೊಳೆಯುವುದಿಲ್ಲ! ಶಾಕಿಂಗ್​ ಸಂಗತಿ ಬಿಚ್ಚಿಟ್ಟ ವೈದ್ಯರು

ಕತ್ರಿನಾಗಿಂತ ಹೆಚ್ಚು ಗಮನ ಸೆಳೆಯಿತು ವಿಜಯ್​ ಸೇತುಪತಿ ಚಪ್ಪಲಿ: ಎಂಥಾ ಸರಳತೆ ಅಂದ್ರು ನೆಟ್ಟಿಗರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 16 =
Remember me
