ಇಂದೋರ್:ಶಾಲಾ ಮಕ್ಕಳು ಸಹಪಾಠಿಗಳೊಂದಿಗೆ ಜಗಳವಾಡುವುದು ಸಹಜ. ಇದು ವಿಕೋಪಕ್ಕೆ ಸಣ್ಣಪುಟ್ಟ ಗಾಯಗಳೂ ಆಗಬಹುದಾದು. ಆದರೆ, ಇಂದೋರ್​ನಲ್ಲಿ ನಡೆದ ಘಟನೆ ಮಾತ್ರ ಆತಂಕಕಾರಿಯಾಗಿದೆ. ಮಕ್ಕಳು ದೊಡ್ಡ ಪ್ರಮಾಣದಲ್ಲಿ ಹಿಂಸಾತ್ಮಕವಾಗಿ ವರ್ತಿಸಿರುವುದು ದಿಗಿಲು ಹುಟ್ಟಿಸಿದೆ. ಈ ಘಟನೆಯ ವಿವರಗಳನ್ನು ಕೇಳಿದರೆ ಇನ್ನು ಮುಂದೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆದರಿಕೆಯೂ ಉಂಟಾಗಿದೆ
ಸಹಪಾಠಿಗಳು ವಿದ್ಯಾರ್ಥಿಯೊಬ್ಬನ ಮೇಲೆ 108 ಬಾರಿ ಜಾಮೆಟ್ರಿ ಕಂಪಾಸ್​ನಿಂದ ಹಲ್ಲೆ ನಡೆಸಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ಇವರೆಲ್ಲರೂ 4ನೇ ತರಗತಿ ವಿದ್ಯಾರ್ಥಿಗಳು.
ಮಧ್ಯಪ್ರದೇಶದ ಇಂದೋರ್‌ನ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಜಾಮೆಟ್ರಿ ಕಂಪಾಸ್​ನಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಘಟನೆಯ ಕುರಿತಂತೆ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಂದ ತನಿಖಾ ವರದಿ ಕೇಳಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಜಗಳದ ವೇಳೆ ಈ ಘಟನೆ ನಡೆದಿದೆ ಎಂದು ಸಿಡಬ್ಲ್ಯೂಸಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ಹೇಳಿದ್ದಾರೆ.
“ಪ್ರಕರಣ ಆಘಾತಕಾರಿಯಾಗಿದೆ. ಇಷ್ಟು ಚಿಕ್ಕ ವಯಸ್ಸಿನ ಮಕ್ಕಳ ಹಿಂಸಾತ್ಮಕ ವರ್ತನೆಗೆ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿ ಕೇಳಿದ್ದೇವೆ, ”ಎಂದು ಅವರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯೂಸಿಯು ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ. ಈ ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವಿಡಿಯೋ ಗೇಮ್‌ಗಳನ್ನು ಆಡುತ್ತಾರೆಯೇ ಎಂಬುದನ್ನು ತಿಳಿಯಬಸಿದೆ ಎಂದೂ ಪೋರ್ವಾಲ್ ಹೇಳಿದರು.
ನವೆಂಬರ್ 24 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾಲೆಯಲ್ಲಿ ನಡೆದ ದಾಳಿಯಿಂದಾಗಿ ನನ್ನ ಮಗನಿಗೆ ಭೀತಿ ಉಂಟಾಗಿದೆ ಎಂದು ತಂದೆ ಆರೋಪಿಸಿದ್ದಾರೆ. “ನನ್ನ ಮಗ ಮನೆಗೆ ಹಿಂದಿರುಗಿದಾಗ ಈ ಬಗ್ಗೆ ತಿಳಿಸಿದ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆದುಕೊಂಡರು ಎಂದು ನನಗೆ ಇನ್ನೂ ತಿಳಿದಿಲ್ಲ. ಶಾಲೆಯ ಆಡಳಿತ ಮಂಡಳಿಯು ತರಗತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುತ್ತಿಲ್ಲ’ ಎಂದು ಅವರು ಆಪಾದಿಸಿದ್ದಾರೆ. ಘಟನೆಯ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದೂ ಹೇಳಿದ್ದಾರೆ.
ದೂರು ನೀಡಿದ ನಂತರ ಸಂತ್ರಸ್ತ ವಿದ್ಯಾರ್ಥಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಮಕ್ಕಳು 10 ವರ್ಷದೊಳಗಿನವರಾಗಿದ್ದು, ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
