ಲಖನೌ:ಉತ್ತರ ಪ್ರದೇಶದ ಮಹಾರಾಜ್​ಗಂಜ್​ ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ವರದಿಯಾಗಿದೆ. 8ನೇ ತರಗತಿ ವಿದ್ಯಾರ್ಥಿಯೊಬ್ಬ 6ನೇ ತರಗತಿ ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಕುತ್ತಿಗೆ ಮೇಲೆ ಚಾಕು ಇಟ್ಟು ಹಣೆಗೆ ಕುಂಕುಮ ಇಟ್ಟಿದ್ದಾನೆ.
ಬಾಲಕಿಯ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸ್ನೇಹಿತರೊಂದಿಗೆ ಸೇರಿ ಕಾಂಪೌಂಡ್​ ಹಾರಿ ಮನೆಯ ಒಳಗೆ ನುಗ್ಗಿದ ಬಾಲಕ, ಹಣೆಗೆ ಕುಂಕುಮ ಇಟ್ಟಿದ್ದಾನೆ. ಬಾಲಕಿ ಕೂಗಿ ಕೊಳ್ಳುತ್ತಿದ್ದಂತೆ ಬಾಲಕ ಅಲ್ಲಿಂದ ಎಸ್ಕೇಪ್​ ಆಗಿದ್ದಾನೆ. ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್​ ಅಧಿಕಾರಿ ರವಿ ಕುಮಾರ್​ ರೈ ಎಂಬುವರು ಮಾಹಿತಿ ನೀಡಿದ್ದು, ಬಾಲಕ ತನ್ನ ಸ್ನೇಹಿತರೊಂದಿಗೆ ಬೈಕ್​ ಮೇಲೆ ಬಂದು ಕೃತ್ಯ ಎಸಗಿದ್ದಾನೆ. ಘಟನಾ ಸಮಯದಲ್ಲಿ ಬಾಲಕಿ ಮನೆಯಲ್ಲಿ ಕಸ ಗುಡಿಸುತ್ತಿದ್ದಳು. ಈ ವೇಳೆ ಒಳಗೆ ನುಗ್ಗಿದ ಬಾಲಕ ಆಕೆಯ ಕುತ್ತಿಗೆಯ ಮೇಲೆ ಚಾಕು ಇಟ್ಟು ಕುಂಕುಮ ಇಟ್ಟಿದ್ದಾನೆ. ಯಾವಾಗ ಬಾಲಕಿ ಕೂಗಿಕೊಂಡಳೋ ಅಲ್ಲಿಂದ ಎಲ್ಲರು ಪರಾರಿಯಾಗಿದ್ದಾರೆ. ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಬಳಿಕ ಬಾಲಕಿಯ ತಂದೆ ಪೊಲೀಸ್​ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯವಳಿ ಮೂಲಕ ಬೈಕ್​ ನಂಬರ್​ ಅನ್ನು ಪತ್ತೆ ಹಚ್ಚಿ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಾಲಕನನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದ್ದು, ಈಗ ಆತನನ್ನು ಬಾಲಾಪರಾಧಿಗೃಹದಲ್ಲಿ ಇರಿಸಲಾಗಿದೆ. ತಾನು ಮಾಡಿದ ಕೃತ್ಯಕ್ಕೆ ಬಾಲಕ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ತಾನು ಹುಡುಗಿಯನ್ನು ಪ್ರೀತಿಸುತ್ತಿದ್ದೇನೆ ಮತ್ತು ಅವಳನ್ನು ಮದುವೆಯಾಗಲು ಬಯಸುತ್ತೇನೆ ಎಂದು ಹೇಳಿದ್ದಾನೆ. ಕಳೆದ ಮೂರು ತಿಂಗಳಿಂದ ಬಾಲಕಿಯನ್ನು ಹಿಂಬಾಲಿಸಿ ಪ್ರಪೋಸ್ ಮಾಡಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆಂದು ತಿಳಿದುಬಂದಿದೆ.
ಬಾಲಕನ ಕಿರುಕುಳವನ್ನು ತಾಳಲಾರದೇ ಸಂತ್ರಸ್ತ ಬಾಲಕಿಯ ಪಾಲಕರು ಮಗಳನ್ನು ಬೇರೆ ಶಾಲೆಗೆ ಸೇರಿಸಿದರೂ ತನ್ನ ಕೃತ್ಯವನ್ನು ಬಾಲಕ ಮುಂದುವರಿಸಿದ್ದ ಎಂದು ತಿಳಿದುಬಂದಿದೆ.(ಏಜೆನ್ಸೀಸ್​)
ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ: ಸಹೋದರಿಯಿಂದಲೇ ಕೊಲೆ ರಹಸ್ಯ ಬಯಲು

ಬರೀ ‘ಕಾಂತಾರ’ ಅಷ್ಟೇ ಅಲ್ಲ, ‘ವಿಕ್ರಾಂತ್​ ರೋಣ’ ಸಹ ಆಸ್ಕರ್​ ಸ್ಪರ್ಧೆಯಲ್ಲಿ

ಜನ್ಮ ನೀಡಿದ ಬೆನ್ನಲ್ಲೇ ಗಂಡು ಮಗುವನ್ನು ಬಾತ್​ರೂಂ ಕಿಟಕಿಯಿಂದ ಹೊರಗೆಸೆದ 20 ವರ್ಷದ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 6 =
Remember me
