ರಾಜ್​ಕೋಟ್:ಶಾಲಾ ಮಕ್ಕಳೂ ಹೃದಯಾಘಾತಕ್ಕೀಡಾಗಿ ಸಾವಿಗೀಡಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಈ ಪಟ್ಟಿಗೆ ಇದೀಗ ಇನ್ನೊಂದು ಹೆಸರು ಸೇರಿಕೊಂಡಿದೆ. ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾಳೆ.
ಗುಜರಾತ್​ನ ರಾಜ್​ಕೋಟ್​ ಎಂಬಲ್ಲಿನ ಶ್ರೀಅಮೃತ್​ಲಾಲ್ ವೀರ್​ಚಂದ್ ಜಸಾನಿ ವಿದ್ಯಾಮಂದಿರದಲ್ಲಿ ಮಂಗಳವಾರ ಬೆಳಗ್ಗೆ ಈ ಪ್ರಕರಣ ನಡೆದಿದೆ. ಇಲ್ಲಿನ ಎಂಟನೇ ತರಗತಿ ವಿದ್ಯಾರ್ಥಿನಿ ರಿಯಾ ಸೋನಿ ಸಾವಿಗೀಡಾದ ಬಾಲಕಿ.
ಮಂಗಳವಾರ ಬೆಳಗ್ಗೆ 7.23ಕ್ಕೆ 8ನೇ ತರಗತಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ರಿಯಾ ಸೋನಿ ಅಸ್ವಸ್ಥಗೊಂಡಿದ್ದು, ಕೂಡಲೇ ಆಕೆಯ ಪಾಲಕರಿಗೆ ಮಾಹಿತಿ ನೀಡಲಾಗಿತ್ತು. ಅವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಆಕೆ ಅಲ್ಲಿಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾಳೆ ಎಂಬುದಾಗಿ ವೈದ್ಯರು ಸ್ಪಷ್ಟಪಡಿಸಿದ್ದರು ಎಂಬುದಾಗಿ ಶಾಲೆಯ ಪ್ರಾಂಶುಪಾಲರು ಶಿಕ್ಷಣ ಇಲಾಖೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಮತ್ತೊಂದೆಡೆ ತಮ್ಮ ಪುತ್ರಿ ಆರೋಗ್ಯವಾಗಿದ್ದು, ಆಕೆಗೆ ಯಾವುದೇ ಅನಾರೋಗ್ಯ ಇರಲಿಲ್ಲ. ಶಾಲಾ ಆಡಳಿತ ಮಂಡಳಿ ಕೊಟ್ಟಿರುವ ಸ್ವೆಟರ್​ ಮಕ್ಕಳನ್ನು ಈ ಕೋಲ್ಡ್​ ವೇವ್​ನಿಂದ ರಕ್ಷಿಸಲು ಸಮರ್ಥವಾಗಿಲ್ಲ ಎಂದು ಬಾಲಕಿಯ ಪಾಲಕರು ಆರೋಪಿಸಿದ್ದಾರೆ. ವಿದ್ಯಾರ್ಥಿನಿ ಕಾರ್ಡಿಯಾಕ್​ ಅರೆಸ್ಟ್​ನಿಂದ ಸಾವಿಗೀಡಾಗಿದ್ದಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಮತ್ತಷ್ಟು ತನಿಖೆಯಿಂದ ಹೊರಬರಬೇಕಾಗಿದೆ.
ಇಬ್ಬರು ವಯಸ್ಕ ಪುತ್ರಿಯರ ಜತೆ ನದಿಗೆ ಹಾರಿದ ತಾಯಿ; ಮೂವರ ಶವವೂ ಪತ್ತೆ

ಬಾಮೈದುನನ ಕೊಂದ ಬಾವ, ಪೊಲೀಸ್ ಠಾಣೆಗೆ ಬಂದು ಶರಣಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 8 =
Remember me
