ಉತ್ತರಪ್ರದೇಶ:ಪರೀಕ್ಷೆಯ ಶುಲ್ಕ ಕಟ್ಟದ ಕಾರಣಕ್ಕೆ ಖಾಸಗಿ ಶಾಲೆಯೊಂದು ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಬಿಟ್ಟಿಲ್ಲ. ಈ ವಿಚಾರವಾಗಿ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶುಲ್ಕ ಕಟ್ಟದ ಕಾರಣಕ್ಕೆ ಇಲ್ಲಿನ ಖಾಸಗಿ ಶಾಲೆಯೊಂದು ಪರೀಕ್ಷೆ ಬರೆಯಲು ಬಿಡಲಿಲ್ಲ ಎಂದು 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ತಿಳಿಸಿದ್ದಾರೆ.
ಇದನ್ನೂ ಓದಿ:ಕೆಮ್ಮಿನ ಸಿರಪ್ ಕುಡಿದು ಮಕ್ಕಳು ನಿಧನ; ಮಹಾರಾಷ್ಟ್ರದ 6 ಕಂಪನಿಗಳ ಲೈಸೆನ್ಸ್​ ರದ್ದು!
“ನನ್ನ ಮಗಳು ಸ್ಥಳೀಯ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದಳು. ಕೆಲವು ಹಣಕಾಸಿನ ಅಡಚಣೆಗಳಿಂದ ನಾನು ಅವಳ ಶಾಲಾ ಶುಲ್ಕವನ್ನು ಜಮಾ ಮಾಡಲು ಸಾಧ್ಯವಾಗಲಿಲ್ಲ” ಎಂದು ಬಾಲಕಿಯ ತಂದೆ ಬಾರಾದರಿ ನಿವಾಸಿ ಅಶೋಕ್ ಕುಮಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ತರಗತಿಯಲ್ಲೇ ಪ್ರಾಣ ಬಿಟ್ಟ ಶಿಕ್ಷಕ
ಶುಲ್ಕವನ್ನು ಸಲ್ಲಿಸಲು ಸ್ವಲ್ಪ ಸಮಯ ಕೇಳಿದ್ದೆ. ಆದರೆ ಶಾಲೆಯ ಆಡಳಿತ ಮಂಡಳಿಯು ತನ್ನ ಮಗಳಿಗೆ ಶುಕ್ರವಾರ ಪರೀಕ್ಷೆಗೆ ಹಾಜರಾಗಲು ಬಿಡಲಿಲ್ಲ . ಮಗಳು ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆಂದು ಹೇಳಿದ್ದಾರೆ.
ನಮ್ಮವರೇ ಅಲ್ಲ… ಕಾಂಗ್ರೆಸ್, ಜೆಡಿಎಸ್​​ನವರು ತಪ್ಪು ಮಾಡಿದ್ರೂ ಬಿಡಲ್ಲ: ಪ್ರಲ್ಹಾದ್ ಜೋಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
