ರಾಯ್ಪುರ:ಅಪ್ಪ ಅಮ್ಮ ಮನೆಯಲ್ಲಿ ಇಲ್ಲದ ಸಮಯ ನೋಡಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚತ್ತೀಸ್​ಗಢದ ಭಿಲೈನ ಪ್ರದೇಶದಲ್ಲಿ ನಡೆದಿದೆ. ಸಾಯುವುದಕ್ಕೂ ಮುನ್ನ ಒಂದು ನೋಟ್​ಬುಕ್​ ತುಂಬ ಐ ಹೇಟ್ ಮೈ ಲೈಫ್ ಎಂದು ಬರೆದಿಟ್ಟಿರುವುದು ಕಂಡುಬಂದಿದೆ.
9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಚಾಂದಿನಿ ಹೆಸರಿನ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಾಕೆ. ಆಕೆಯ ತಂದೆ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದ ಸಂಬಂಧಿಯೊಬ್ಬರನ್ನು ನೋಡಲು ಹೋಗಿದ್ದರಂತೆ. ಆ ವೇಳೆ ಬಾಲಕಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಅದನ್ನು ಗಮನಿಸಿದ ಸ್ಥಳೀಯರು ಆಕೆಯ ತಂದೆ ತಾಯಿ ಹಾಗೂ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಲಕಿಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಚಾಂದಿನಿ ರೂಮಿನಲ್ಲಿ ಪರಿಶೀಲನೆ ನಡೆಸಿದಾಗ ಒಂದು ನೋಟ್ ಬುಕ್ ಸಿಕ್ಕಿದೆ. ಅದರಲ್ಲಿ ಆಕೆ ಸುಮಾರು 50 ಪುಟಗಳಲ್ಲಿ ಐ ಹೇಟ್ ಮೈ ಲೈಪ್ ಎಂದು ಬರೆದಿಟ್ಟಿದ್ದಾಳೆ. ಕೆಲ ಪುಟಗಳಲ್ಲಿ ಒಬ್ಬ ಹುಡುಗ ಹಾಗೂ ಹುಡುಗಿ ಒಟ್ಟಾಗಿ ಕುಳಿತಿರುವ ಚಿತ್ರ ಬರೆದಿದ್ದಾಳೆ. ಇನ್ನೊಂದು ಪುಟದಲ್ಲಿ ಒಬ್ಬ ಹುಡುಕಿ ಒಬ್ಬಂಟಿಯಾಗಿ ಕುಳಿತಿರುವ ಫೋಟೋ ಬರೆದಿದ್ದಾಳೆ. ಆಕೆ ಆ ರೀತಿ ಬರೆದಿರುವುದಕ್ಕೂ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೂ ಏನಾದರೂ ಸಂಬಂಧವಿದೆಯೇ ಎಂದು ತನಿಖೆ ನಡೆಸಲಾಗುತ್ತಿದೆ. (ಏಜೆನ್ಸೀಸ್)
ಯಮುನಾ ನದಿಗೆ ಹಾರಿದ ಸೋಶಿಯಲ್ ಮೀಡಿಯಾ ಸ್ಟಾರ್! ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಆತ್ಮಹತ್ಯೆಯ ದೃಶ್ಯ

11 ವಯಸ್ಸಿಗೇ ಮಗುವಿಗೆ ಜನ್ಮವಿತ್ತ ಬಾಲಕಿ! ಇದು ಹೇಗಾಗಿದ್ದು ಎಂದು ತಲೆ ಕೆಡಿಸಿಕೊಂಡಿರುವ ಕುಟುಂಬ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four + two =
Remember me
