ನವದೆಹಲಿ:2020-21ನೇ ಸಾಲಿನ ಪ್ರಥಮ ವರ್ಷದ ತರಗತಿಗಳು ನವೆಂಬರ್​ ಒಂದರಿಂದಲೇ ಆರಂಭವಾಗಲಿವೆ. ಯುನಿವರ್ಸಿಟಿ ಗ್ರ್ಯಾಂಟ್​ ಕಮಿಷನ್​ (ಯುಜಿಸಿ) ಈ ಬಗ್ಗೆ ಹೊಸದಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಯುಜಿಸಿಯು ಸ್ನಾತಕ ಹಾಗೂ ಸ್ನಾತಕೋತ್ತರದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಹೊಸ ಮಾರ್ಗಸೂಚಿ ಹಾಗೂ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಆ ಕುರಿತು ಅಕ್ಟೋಬರ್​ ಒಳಗೆ ಪ್ರವೇಶ ಪ್ರಕ್ರಿಯೆ ಮುಗಿಸಲು ಸಂಬಂಧಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಆ ಪ್ರಕಾರ 2020-21ನೇ ಸಾಲಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್​ಗಳ ವಿದ್ಯಾರ್ಥಿಗಳಿಗೆ ನ. 1ರಿಂದಲೇ ತರಗತಿ ಆರಂಭವಾಗಲಿದೆ. ಒಂದು ವೇಳೆ ಅರ್ಹ ಪರೀಕ್ಷೆಗಳ ಫಲಿತಾಂಶ ಘೋಷಣೆ ವಿಳಂಬವಾದಲ್ಲಿ ಸಂಬಂಧಿತ ಯುನಿವರ್ಸಿಟಿಗಳು ಕನಿಷ್ಠ ನ. 18ರ ಒಳಗೆ ತರಗತಿ ಆರಂಭಿಸಬೇಕು ಎಂದು ಯುಜಿಸಿ ಮಾರ್ಗಸೂಚಿ ತಿಳಿಸಿದೆ.
In view of the#COVID19Pandemic,@ugc_indiahas issued guidelines on Examinations & Academic Calendar for UG & PG Students for the Session 2020-21.
For more details, visit the UGC website:https://t.co/HTMOrA0jNl#UGCGuidelinespic.twitter.com/1i7xhumDk7
— Dr. Ramesh Pokhriyal Nishank (@DrRPNishank)September 25, 2020

ನ. 30ರ ಒಳಗೆ ಉಳಿಕೆ ಸೀಟುಗಳ ಪ್ರವೇಶಾತಿ ಕೂಡ ಮುಗಿಸಿರಬೇಕು. ಇನ್ನು ಪ್ರವೇಶಾತಿಯನ್ನು ಪ್ರವೇಶ ಪರೀಕ್ಷೆ ಮೂಲಕವೇ ನಡೆಸುವಂಥ ಹಾಗೂ ಆ ನಿಟ್ಟಿನಲ್ಲಿ ತಯಾರಾಗಿರುವಂಥ ಶಿಕ್ಷಣ ಸಂಸ್ಥೆಗಳು ಆದಷ್ಟು ಶೀಘ್ರ ಪ್ರಥಮ ವರ್ಷದ ಪಿಜಿ-ಯುಜಿ ತರಗತಿ ಆರಂಭಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಫಸ್ಟ್​ ಸೆಮಿಸ್ಟರ್ ಪರೀಕ್ಷೆಯನ್ನು 2021ರ ಮಾರ್ಚ್​ 8-26ರ ಅವಧಿಯಲ್ಲಿ ನಡೆಸುವಂತೆಯೂ ನಿರ್ದೇಶನ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್​ ನಿಶಾಂಕ್​ ಟ್ವೀಟ್​ ಮೂಲಕ ಈ ವಿಷಯ ಪ್ರಕಟಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
