ವಾರಣಾಸಿ:ದೇಶದ ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ರಾಜನ್ ಮಿಶ್ರಾ ಅವರು ಮಾರಕ ಕೋವಿಡ್19 ಸೋಂಕಿನಿಂದ ಇಂದು ಸಂಜೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಕಳೆದ ಐದು ದಿನದ ಹಿಂದೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಇಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಕೂಡ ಆಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಅವರು ಪುತ್ರ ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಮೃತರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಸಂಗೀತ ವಲಯ ಕಂಬನಿ ಮಿಡಿದಿದೆ. ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಪ್ರಧಾನಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ರಾಜನ್ ಮಿಶ್ರಾ ಅವರು ತಮ್ಮ ಸಹೋದರ ಸಾಜನ್ ಮಿಶ್ರಾ ಅವರೊಡನೆ ದೇಶ ಹಾಗೂ ವಿದೇಶದಲ್ಲಿ ಅಪಾರ ಸಂಗೀತ ಕಾರ್ಯಕ್ರಮಗಳನ್ನು ನೀಡಿ ಜನಮನಸೋರೆಗೊಂಡಿದ್ದರು. 1951 ರಲ್ಲಿ ವಾರಣಾಸಿಯ ಸಂಗೀತ ವಿದ್ವಾಂಸರ ಕುಟುಂಬದಲ್ಲಿ ರಾಜನ್ ಮಿಶ್ರಾ ಜನಿಸಿದ್ದರು.
‘ಯಾವುದೇ ಕೈಗಾರಿಕೆಗಳು ವೈದ್ಯಕೀಯ ಉದ್ದೇಶಕ್ಕೆ ಹೊರತುಪಡಿಸಿ ಅನ್ಯ ಉದ್ದೇಶಕ್ಕೆ ಆಕ್ಸಿಜನ್ ಉತ್ಪಾದಿಸುವ ಹಾಗಿಲ್ಲ’

ಕರೊನಾ: ‘ಹೆದರಬೇಡಿ, ನಾವು ನಿಮ್ಮೊಂದಿಗಿದ್ದೇವೆ’ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ ಅಮೆರಿಕ ರಾಯಭಾರ ಕಚೇರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eighteen =
Remember me
