ನವದೆಹಲಿ:ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆಯನ್ನು (CLAT) ಆಫ್‌ಲೈನ್ ಮೂಲಕ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ.ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠವು ವಕೀಲ ಮಿತುಲ್ ಜೈನ್ ಸಲ್ಲಿಸಿದ್ದ ಮನವಿಯನ್ನು ಆಲಿಸಲು ನಿರಾಕರಿಸಿತು.ಕ್ಲಾಟ್ ಸಮಿತಿಯು ಆರಂಭದಲ್ಲಿ ಪರೀಕ್ಷೆಯನ್ನು ಆಫ್‌ಲೈನ್‌ ಮೂಲಕ ನಡೆಸಲು ನಿರ್ಧರಿಸಿತ್ತು. ಆದರೆ ಈಗ ಅದು ಆನ್‌ಲೈನ್ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಅರ್ಜಿ ಸಲ್ಲಿಸಲು ಹಾಜರಾದ ವಕೀಲ ವಾದಿಸಿದರು. ಈ ಕ್ರಮವು ಕಂಪ್ಯೂಟರ್ ಹೊಂದಿರದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಹಾಜರಾಗುವುದನ್ನು ತಡೆದಂತಾಗುತ್ತದೆ ಎಂದು ವಕೀಲರು ವಾದಿಸಿದ್ದಾರೆ.
ಇದನ್ನೂ ಓದಿ:ಆಗಸ್ಟ್ 22 ರಂದು ನಡೆಯಲಿರುವ ಸಿಎಲ್​ಎಟಿ ಪರೀಕ್ಷೆ ಹೀಗಿರಲಿದೆ..
ಕ್ಲಾಟ್ ಸಮಿತಿ ಸಮರ್ಥ ಪರಿಹಾರ ಕೈಗೊಳ್ಳಬೇಕು ಹಾಗೂ ಮಹತ್ವಾಕಾಂಕ್ಷಿ ಅಭ್ಯರ್ಥಿಗಳಿಗೆ ಒಂದು ತಿಂಗಳ ಕಾಲಾವಕಾಶ ನೀಡಬೇಕು ಎಂದು ವಕೀಲರು ಹೇಳಿದರು.CLAT, ದೇಶಾದ್ಯಂತ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ನೀಡುವ ಪದವಿ ಮತ್ತು ಸ್ನಾತಕೋತ್ತರ ಕಾನೂನು ಶಿಕ್ಷಣ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಪ್ರತಿನಿಧಿ ವಿಶ್ವವಿದ್ಯಾಲಯಗಳನ್ನು ಒಳಗೊಂಡಿರುವ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಇದನ್ನು ಆಯೋಜಿಸುತ್ತದೆ. ಕ್ಲಾಟ್‌ ಆನ್‌ಲೈನ್ ಪರೀಕ್ಷೆ ಆಗಸ್ಟ್ 22 ರಂದು ನಡೆಯಲಿದೆ.
ಸಿಬಿಐಗೆ ಸುಶಾಂತ್‌ ಸಾವಿನ ಪ್ರಕರಣ: ಸುಪ್ರೀಂಕೋರ್ಟ್‌ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + eighteen =
Remember me
