ನವದೆಹಲಿ:ಆಗಸ್ಟ್​ 15ಕ್ಕೆ ದೇಶೀಯ ಕರೊನಾ ಲಸಿಕೆ ಸಜ್ಜಾಗಲಿದೆ ಎಂಬ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಸಂಸದೀಯ ಸ್ಥಾಯಿ ಸಮಿತಿಗೆ ಸ್ಪಷ್ಟನೆ ನೀಡಿದ್ದಾರೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್​) ಸಂಶೋಧಕರು ಆಗಸ್ಟ್​ 15ಕ್ಕೆ ಲಸಿಕೆ ಸಜ್ಜುಗೊಳಿಸುವ ಮಹತ್ವಾಕಾಂಕ್ಷೆ ಹೊಂದಿದ್ದರು. ಆದರೆ, ಕನಿಷ್ಠ ಮುಂದಿನ ವರ್ಷಾರಂಭದವರೆಗೂ ಕರೊನಾ ನಿಗ್ರಹಕ್ಕೆ ದೇಶೀಯ ಲಸಿಕೆ ಸಜ್ಜಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ;ಭಾರತವಷ್ಟೇ ಅಲ್ಲ, ಭಾರತದ ಔಷಧದ ಮೇಲೂ ಅತೀವ ನಂಬಿಕೆ ಬ್ರೆಜಿಲ್​ ಅಧ್ಯಕ್ಷರಿಗೆ…!
ಲಸಿಕೆ ಸಜ್ಜುಗೊಳಿಸುವಲ್ಲಿ ಉಂಟಾಗುವ ವಿಳಂಬವನ್ನು ತಪ್ಪಿಸಲು ಐಸಿಎಂಆರ್​ನಿಂದ ಪತ್ರ ಬರೆಯಲಾಗಿತ್ತು. ಇದರರ್ಥ ಯಾವುದೇ ಪ್ರಕ್ರಿಯೆಯನ್ನು ಕೈಬಿಡುವ ಉದ್ದೇಶವಿರಲಿಲ್ಲ ಎಂದು ಸ್ಥಾಯಿ ಸಮಿತಿಗೆ ಸ್ಪಷ್ಟಪಡಿಸಲಾಗಿದೆ.
ಸಂಸತ್​ನಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಸಲಹೆಗಾರರು, ಅಧಿಕಾರಿಗಳು ಸಂಸದರಿಗೆ ಈ ವಿಷಯ ತಿಳಿಸಿದ್ದಾರೆ. ಭಾರತ ಲಸಿಕೆ ತಯಾರಿಕೆ ಹಾಗೂ ಜನರಿಕ್​ ಔಷಧ ಉತ್ಪಾದನೆಯಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿದೆ. ಅಂತೆಯೇ ಕರೊನಾ ಲಸಿಕೆ ಕಂಡು ಹಿಡಿಯುವಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ;ಕರೊನಾ ಲಸಿಕೆ ಸಜ್ಜಾಗದಿದ್ದರೆ ಭಾರತದ ಸ್ಥಿತಿ ಹರೋಹರ…! ನಿತ್ಯ 3 ಲಕ್ಷ ಹೊಸ ಕೇಸ್​ ನಿಶ್ಚಿತ…
ಬಾಬಾ ರಾಮ್​ದೇವ್​ ಅವರ ಕರೊನಾ ಔಷಧದ ಬಗ್ಗೆಯೂ ಸಮಿತಿ ಸದಸ್ಯರ ಪ್ರಶ್ನೆಗಳನ್ನು ಕೇಳಿದರೂ, ಅಧಿಕಾರಿಗಳು ಆ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಲಾಗಿದೆ.
ಸೋಮವಾರ (ಜು.13) ದೇಶೀಯ ಕರೊನಾ ಲಸಿಕೆ ಕೊವಾಕ್ಸಿನ್​ಅನ್ನು ಮಾನವರ ಮೇಲೆ ಪ್ರಯೋಗಿಸುವ ಕ್ಲಿನಿಕಲ್​ ಟ್ರಯಲ್​ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕಾಗಿ ಬೆಳಗಾವಿ ಸೇರಿ ದೇಶದ 12 ವೈದ್ಯಕೀಯ ಸಂಸ್ಥೆಗಳನ್ನು ಗುರುತಿಸಲಾಗಿದೆ. ಜು.7ರಿಂದಲೇ ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತಿದೆ.
ಕರೊನಾ ಲಸಿಕೆ ಪಡೆದ ಜಗತ್ತಿನ ಮೊತ್ತ ಮೊದಲ ವ್ಯಕ್ತಿ ಈತ; ಮೈನವಿರೇಳಿಸುವ ಕ್ಲಿನಿಕಲ್​ ಟ್ರಯಲ್​ ಅನುಭವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eleven =
Remember me
