ಶಿವಮೊಗ್ಗ:ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ 11.40ಕ್ಕೆ ವಿಶೇಷ ವಿಮಾನದ ಮೂಲಕ ಶಿವಮೊಗ್ಗದ ವಿಮಾನ ನಿಲ್ದಾಣದಕ್ಕೆ ಪ್ರಧಾನಿ ಮೋದಿ ಬಂದಿಳಿದರು.
ಇದನ್ನೂ ಓದಿ:ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ: ಮಲೆನಾಡಲ್ಲಿ ನಮೋ ಮೋಡಿ​
ವಿಮಾನ ನಿಲ್ದಾಣ ಉದ್ಘಾಟನೆ ಮಾಡಿ ಪ್ರಧಾನಿ ಮೋದಿ, ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ವಿಮಾನ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಬಗ್ಗೆ ಮಾತನಾಡಿದ್ದಾರೆ. ‘ಯಡಿಯೂರಪ್ಪ ಅವರು ಹೋರಾಟದಿಂದಲೇ ಬೆಳೆದುಬಂದವರು. ಪುರಸಭೆ ಅಧ್ಯಕ್ಷರಾಗಿದ್ದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆದರೆ ಎದೆಗುಂದದೆ ಪುಟಿದು ಎದ್ದು ಬಂದಿದ್ದಾರೆ. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಅವರಿಗೆ ಜನ್ಮ ದಿನದ ಶುಭಾಶಯಗಳು’ ಎಂದು ಮುಖ್ಯಮಂತ್ರಿ ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಪ್ರಧಾನಿ ರೋಡ್ ಶೋ ಹಿನ್ನೆಲೆ; 10 ಕ್ವಿಂಟಾಲ್ ಹೂ ಸಿದ್ಧಗೊಳಿಸಿದ ಕಾರ್ಯಕರ್ತರು
ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೂರು ಕಾಲ ಚನ್ನಾಗಿ ಬಾಳಲಿ ಎಂದು ಸಿಎಂ ಬೊಮ್ಮಾಯಿ ಶುಭ ಹಾರೈಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
